ಉಜಿರೆ :(ಆ.14) ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು ಹಾಗೂ ಲಕ್ಷ್ಮಣ ಇವರ ಮನೆಯ ಹಿಂಭಾಗ ಗುಡ್ಡ ಕುಸಿದು ಅಪಾಯದ ಮುನ್ಸೂಚನೆಯಲ್ಲಿದೆ. ಆಗಸ್ಟ್ 14 ರಂದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಬೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್,
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷರಾದ ರವಿ ಬರಮೇಲು, ಸದಸ್ಯರಾದ ಶಶಿಕಲಾ ದೇವಪ್ಪ ಗೌಡ, ಜಗನ್ನಾಥ ರೈ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಿರಂಜನ ಶೆಟ್ಟಿ, ವಾರ್ಡ್ ಅಧ್ಯಕ್ಷರಾದ ಅಶ್ವಿನಿ ಹಾಗೂ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.