Wed. Nov 20th, 2024

Belthangadi: ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ:(ಆ.16) ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹನೀಯರನ್ನು ನೆನಪಿಸಿಕೊಳ್ಳುವುದಲ್ಲದೆ ಅವರಿಗೆ ಗೌರವ ಪೂರ್ವಕ ಶ್ರದ್ಧಾಂಜಲಿಯನ್ನು ಅರ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಹೇಳಿದರು.

ಇದನ್ನೂ ಓದಿ: 🛑ಧರ್ಮಸ್ಥಳ: (ಆ.17) ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್(ರಿ.) ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ (ರಿ.) ಧರ್ಮಸ್ಥಳ ಇದರ ಆಶ್ರಯದಲ್ಲಿ

ಅವರು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ, ದೇಶದ ಪ್ರತಿಯೊಬ್ಬ ನಾಗರಿಕರು ರಾಷ್ಟ್ರ ಅಭಿಮಾನವನ್ನು ಹೊಂದಿರಬೇಕು. ಅನ್ನ ನೀಡುವ ರೈತರನ್ನು ಹಾಗೂ ದೇಶ ಕಾಯುವ ಸೈನಿಕರನ್ನು ನಾವೆಲ್ಲರೂ ಗೌರವಿಸಬೇಕು. ವಿದ್ಯಾರ್ಥಿಗಳು ದೇಶಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಹಾಗೂ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *