ಕೊಪ್ಪಳ (ಆ.16): ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಹೊಸ ಗೇಟ್ ಅಳವಡಿಸಲಾಗುತ್ತಿದ್ದು, ಸ್ಥಳಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಭೇಟಿ ನೀಡಿದ್ದಾರೆ. ಸ್ಟಾಪ್ಲಾಗ್ ಗೇಟ್ ಕೂರಿಸಲು ತಜ್ಞರು ಹರಸಾಹಸ ಪಡುತ್ತಿದ್ದು, ತಜ್ಞ ಕನ್ನಯ್ಯ ನಾಯ್ಡು ತಂಡಕ್ಕೆ ಜಮೀರ್ ಧೈರ್ಯ ತುಂಬಿದ್ದಾರೆ.
ಇದನ್ನೂ ಓದಿ: 🛑ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ
ಜೊತೆಗೆ ಸ್ಟಾಪ್ಲಾಗ್ ಗೇಟ್ ಅಳವಡಿಸಿ ಯಶಸ್ವಿಗೊಳಿಸಿದರೆ, ಪ್ರತಿಯೊಬ್ಬ ಕಾರ್ಮಿಕರಿಗೆ ವೈಯಕ್ತಿಕವಾಗಿ 50 ಸಾವಿರ ಕೊಡುತ್ತೇನೆ. ಧೈರ್ಯವಾಗಿ ಕೆಲಸಮಾಡಿ ಎಂದು ಆತ್ಮವಿಶ್ವಾಸ ತುಂಬಿದ್ದಾರೆ. ಸಚಿವ ಜಮೀರ್ ಅಹ್ಮದ್ ಹೇಳಿಕೆಯಿಂದ ಕಾರ್ಮಿಕರು ಅವರ ಮಾತನ್ನು ಕೇಳಿ ಸಂತೋಷಗೊಂಡಿದ್ದಾರೆ.
ಏನಿದು ಸ್ಟಾಪ್‌ಲ್ಯಾಗ್ ಗೇಟ್?
ಶಾಶ್ವತ ಗೇಟ್ ಅಳವಡಿಕೆಯ ಬದಲು ಸ್ಟಾಪ್‌ಲ್ಯಾಗ್ ಗೇಟ್ ಅಳವಡಿಸಲಾಗುತ್ತದೆ. ಇದೊಂದು ತಾತ್ಕಾಲಿಕ ಗೇಟ್. ಒಟ್ಟು 20 ಅಡಿ ಎತ್ತರದ ಗೇಟ್ ಇದಾಗಿದ್ದು ಇದನ್ನು ನಾಲ್ಕು ಭಾಗ ಮಾಡಲಾಗಿದೆ. ಒಂದೊಂದು ಭಾಗ ಕೂಡ 4 ಅಡಿ ಎತ್ತರ, 64 ಅಡಿ ಅಗಲ ಇದೆ. ಪ್ರತೀ ಭಾಗವೂ ಬರೋಬ್ಬರಿ 13 ಟನ್ ತೂಕ ಹೊಂದಿವೆ. ಪ್ರತೀ ಭಾಗದಿಂದಲೂ 25 ಟಿಎಂಸಿ ನೀರು ಸಂಗ್ರಹ ಆಗುತ್ತದೆ. ಸದ್ಯಕ್ಕೆ 3 ಭಾಗಗಳನ್ನು ಮಾತ್ರ ಅಳವಡಿಸಲಾಗ್ತಿದ್ದು, ಕೆಲಸ ಯಶಸ್ವಿ ಆದ ನಂತರ ಉಳಿದ ಭಾಗವನ್ನು ಅಳವಡಿಕೆ ಮಾಡಲಾಗುತ್ತದೆ.