Thu. Dec 5th, 2024

Hassan: ಒಂದೇ ಕುಟುಂಬದ ಮೂವರು ದುರಂತ ಅಂತ್ಯ – ರಮ್ಮಿ ಆಟಕ್ಕೆ ಇಡೀ ಕುಟುಂಬವೇ ಬಲಿ

ಹಾಸನ:(ಆ.17) ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ.

ಇದನ್ನೂ ಓದಿ: 🛑ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು. ಕಾರು ಚಾಲಕನಾಗಿದ್ದ ಶ್ರೀನಿವಾಸ್, ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ವೇತಾ.

ಶ್ರೀನಿವಾಸ್ ಸಾಕಷ್ಟು ಸಾಲ ಮಾಡಿಕೊಂಡಿದ್ದ, ಈ ಕಾರಣಕ್ಕಾಗಿಯೇ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಮಂಗಳವಾರ ಈ ಮೂವರು ಕಾಣೆಯಾಗಿದ್ದರು. ಮೂವರಿಗಾಗಿ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ನಂತರ ಕುಟುಂಬಸ್ಥರು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಿನ್ನೆ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ಶವವನ್ನು ಹೊರತೆಗೆದಿದ್ದಾರೆ. ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಎಸ್ಪಿ ಮಹಮದ್, ಸುಜೀತಾ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *