ಮಂಗಳೂರು:(ಆ.19) ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ. ಇದೇ ವೇಳೆ ಖಾಸಗಿ ಬಸ್ಸಿಗೆ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಲಾಲ್‌ಬಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ.
ಇದನ್ನೂ ಓದಿ: 🔶ಉಜಿರೆ : ಉಜಿರೆ SDM ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಸಂಸ್ಕೃತೋತ್ಸವ”
ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಿದ್ದಂತೆ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನ ಮೇಲೆ ಕಲ್ಲೆಸೆದಿದ್ದಾರೆ ಎನ್ನಲಾಗಿದೆ. ಪರಿಣಾಮ ಬಸ್ಸಿನ ಗಾಜು ಜಖಂಗೊಂಡಿದೆ. ಈ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆಯಿತು. ಮಹಾನಗರ ಪಾಲಿಕೆ ಎದುರು ರಸ್ತೆಯಲ್ಲಿ ಟಯರ್‌ಗೆ ಬೆಂಕಿಹಚ್ಚಿ ಪ್ರತಿಭಟಿಸಲಾಯಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ರಮಾನಾಥ ರೈ ಮೊದಲಾದವರು ಭಾಗಿಯಾಗಿದ್ದರು. ಈ ನಾಯಕರ ಸಮ್ಮುಖದಲ್ಲೇ ಪ್ರತಿಭಟನೆ ನಡೆದಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬಿಗಿಬಂದೋಬಸ್ತ್ ಏರ್ಪಡಿಸಿದ್ದಾರೆ.