ಉಜಿರೆ : (ಆ.19) ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿನಿಯರಿಂದಲೂ ರಾಖಿ ತಯಾರು ಮಾಡಿ ತಮ್ಮ ತರಗತಿಯ ಸಹಪಾಠಿಗಳಿಗೆ ರಾಖಿ ಕಟ್ಟುವ ಸಂಪ್ರದಾಯವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನೀಡಲಾಯಿತು.
ಇದನ್ನೂ ಓದಿ: 🔴ಬೆಳ್ತಂಗಡಿ: ICYM ಮತ್ತು YCS ಬೆಳ್ತಂಗಡಿ ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನ
ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಕಿ ಸವಿತಾ ವೇದಪ್ರಕಾಶ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಾತ್ವಿಕ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಇನಿಕ ವಂದಿಸಿದರು.