ಗುರುವಾಯನಕೆರೆ:(ಆ.20) ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆಗಸ್ಟ್ 20 ರಂದು ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆಯಲ್ಲಿ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮತ್ತು ಮೌನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ; 🔴ಉಜಿರೆ :(ಆ.24) ಶ್ರೀ ಧ.ಮಂ.ಸ್ವಾ.ಮಹಾವಿದ್ಯಾಲಯ, ಉಜಿರೆ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ
ಈ ಪ್ರತಿಭಟನೆಯಲ್ಲಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ, ಪ್ರತಿಭಟನೆಗೆ ಶಕ್ತಿ ತುಂಬಿದರು.
ನಂತರ ವಿದ್ಯಾರ್ಥಿಗಳೆಲ್ಲರೂ ಎರಡು ನಿಮಿಷದ ಮೌನಚರಣೆ ಆಚರಿಸಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಕೋರಿದರು. ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲಾ ಸರ್ಕಾರಗಳೂ ಪ್ರಥಮ ಆದ್ಯತೆ ನೀಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಒಕ್ಕೊರಲಿನಿಂದ ಆಗ್ರಹಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.
ಈ ಪ್ರತಿಭಟನೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ ಪ್ರಜ್ವಲ್ ರೈ ಕೋಶಾಧಿಕಾರಿಗಳಾದ ಎಂಕೆ ಕಾಶಿನಾಥ್ ರವರು ಉಪಸ್ಥಿತರಿದ್ದರು,
ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಶ್ರೀ ಚಂದ್ರಶೇಖರ ಗೌಡರವರು ನೆರವೇರಿಸಿದರು.