ಮಂಗಳೂರು:(ಆ.20) ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರು ನಡೆಯ ಕುರಿತು ಎಂಎಲ್ಸಿ ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಈಗ ವಿವಾದದ ಕೇಂದ್ರಬಿಂದು ಆಗಿದೆ. ಈ ಬಗ್ಗೆ ಜಿಲ್ಲಾ ಬಿಜೆಪಿ ಪೊಲೀಸ್ ಇಲಾಖೆಗೆ ದೂರು ನೀಡಿದೆ.
ಇದನ್ನೂ ಓದಿ: 🔴ಮಂಗಳೂರು: ಮಂಗಳೂರಿನ ಶಕ್ತಿ ವಸತಿ ಶಾಲೆಯಲ್ಲಿ ರಕ್ಷಾಬಂಧನ ಹಬ್ಬದ ಆಚರಣೆ
ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಒಂದು ವೇಳೆ ಅದು ಆಗದಿದ್ದಲ್ಲಿ ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೆ ಬರಬಹುದು ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮ.ನ.ಪಾದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ. ಗೋ ಬ್ಯಾಕ್ ಗವರ್ನರ್, ಗೆಟ್ ಔಟ್ ಗೆಹ್ಲೋಟ್ ಎಂದು ಘೋಷಣೆ ಕೂಗಿದ್ದರು.
ನಿನ್ನೆ ನಗರ ಪೊಲೀಸ್ ಕಮೀಷನರ್ ಅವರಿಗೆ ಬಿಜೆಪಿ ಕೂಟ ದೂರು ನೀಡಿದೆ. ಈ ವೇಳೆ ಶಾಸಕರಾದ ವೇದವ್ಯಾಸ್ ಕಾಮತ್, ವೈ ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಪ್ರಮುಖರು ಸೇರಿದ್ದರು.