ಪುತ್ತೂರು:(ಆ.20) ನಗರದ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ(ಆ.20) ಮಧ್ಯಾಹ್ನ ನಡೆದಿದೆ.ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: 🔴ಉಜಿರೆ : ಅನುಗ್ರಹ ಶಾಲೆಯಲ್ಲಿ ಹೆಚ್ಚುವರಿ ಮೂಲಭೂತ ಸೌಕರ್ಯಗಳ ಉದ್ಘಾಟನೆ
ಘಟನಾ ಸ್ಥಳಕ್ಕೆ ತೆರಳಿದ ಪುತ್ತೂರು ಪೊಲೀಸರು ಸಿ ಸಿ ಟಿವಿ ಪರಿಶೀಲನೆ ನಡೆಸಿದ್ದು, ಚೂರಿ ಇರಿದ ಶಾಲಾ ವಿದ್ಯಾರ್ಥಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಯಾವ ಕಾರಣಕ್ಕೆ ಚೂರಿ ಇರಿಯಲಾಗಿದೆ ಎಂಬ ವಿಚಾರ ಇನ್ನಷ್ಟೇ ತಿಳಿದುಬರಬೇಕಿದೆ.
ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ. ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.
ಮೂಲಗಳ ಪ್ರಕಾರ, ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಆಂಚೆ ಕಚೇರಿ ಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಘಟನೆ ನಡೆದಿದೆ.
ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿಯ ಮಧ್ಯೆ ಯಾವುದೋ ವಿಷಯಕ್ಕೆ ಸಣ್ಣ ಜಗಳವಾಗಿದೆ. ಈ ವೇಳೆ ವಿದ್ಯಾರ್ಥಿಯೂ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದು ಹೇಳಲಾಗುತ್ತಿದೆ.
ಮುಂದುವರಿದ ಭಾಗವಾಗಿ ವಿದ್ಯಾರ್ಥಿನಿ ಸರಕಾರಿ ಆಸ್ಪತ್ರೆಯಲ್ಲಿ ಆಡ್ಮಿಟ್ ಆಗಿದ್ದು, ಆಕೆಯ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ. ವಿದ್ಯಾರ್ಥಿನಿ ತನಗೆ ಆದೇ ವಿದ್ಯಾರ್ಥಿ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿರುವುದಾಗಿ ತಿಳಿದು ಬಂದಿದೆ. ಸದ್ಯ ಪೊಲೀಸರು ಘಟನೆ ನಡೆದ ಸ್ಥಳದ ಸಿಸಿಟಿವಿ ವಿಡಿಯೋ ಪರಿಶೀಲಿಸುತ್ತಿದ್ದು. ಆಕೆಯ ಜತೆಗಿದ್ದ ಬೇರೆ ವಿದ್ಯಾರ್ಥಿಗಳ ಬಳಿಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.