Wed. Nov 20th, 2024

Belthangadi: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದನ್ನೇ ಅಪರಾಧ ಎಂದು ಬಿಂಬಿಸಿ! – ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರದೃಷ್ಟಕರ ಮತ್ತು ಸಂವಿಧಾನ ವಿರೋಧಿ – ರಕ್ಷಿತ್ ಶಿವರಾಮ್ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ

ಬೆಳ್ತಂಗಡಿ:(ಆ.21) ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ ಅಥವಾ ಸರಕಾರಿ ಪ್ರಾಯೋಜಿತ ಬೆದರಿಕೆಯೇ? ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದ್ದಾರೆ.

ಇದನ್ನೂ ಓದಿ: 🔴ಬೆಳ್ತಂಗಡಿ: ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡುಬಂದರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

ಅವರು ಬುಧವಾರ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ ಸಚಿವ ಜಮೀರ್ ರವರು ರಾಜ್ಯದಲ್ಲಿ ಆಗುವ ಅನಾಹುತಗಳಿಗೆ ರಾಜ್ಯಪಾಲರೇ ಜವಾಬ್ದಾರಿ ಎನ್ನುತ್ತಾರೆ. ಎಂಎಲ್‌ಸಿ ಐವಾನ್ ಡಿಸೋಜ ಅವರು ಬಾಂಗ್ಲಾ ಮಾದರಿ ದಾಳಿ ಮಾಡಬೇಕಾಗುತ್ತದೆ ಎನ್ನುತ್ತಾರೆ. ಇದರರ್ಥ ಏನು? ಎಂದು ಪ್ರಶ್ನಿಸಿದರು.

ರಕ್ಷಿತ್ ಶಿವರಾಮ್ ರವರು ಪ್ರಧಾನಿ ನರೇಂದ್ರ ಮೋದಿಯವರು ಹಾಸಿಗೆ ದಿಂಬು ಕಟ್ಟಿಕೊಂಡು ಒಡಬೇಕಾಗುತ್ತದೆ ಎನ್ನುತ್ತಾರೆ. ರಾಜ್ಯಪಾಲರ ತೀರ್ಮಾನ ಸರಿಯೇ ತಪ್ಪೇ ಎಂದು ಪ್ರಶ್ನಿಸಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಪ್ರಶ್ನಿಸಲು ಅವಕಾಶವಿದೆ. ನ್ಯಾಯಾಲಯಕ್ಕೆ ಹೋದಾಗ ಅಲ್ಲಿ 29ರವರೆಗೆ ಅಂದರೆ 10 ದಿನ ತಡೆಯಾಜ್ಞೆ ನೀಡಿದ್ದಾರೆ. ಹಾಗಿದ್ದರೆ ಈ ದೂರುದಾರರು ನ್ಯಾಯಾಧೀಶರ ಮೇಲೂ ಸ್ಟೈಕ್ ಮಾಡಿದರೆ ಹೇಗಿದ್ದೀತು?ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ ನಾಯಕ್.

ಒಂದು ವೇಳೆ ನ್ಯಾಯಾಧೀಶರು ಸಿದ್ದರಾಮಯ್ಯನವರ ವಿರುದ್ಧ ತೀರ್ಪು ಕೊಟ್ಟರೆ ನ್ಯಾಯಾಧೀಶರ ವಿರುದ್ಧ ಇವರು ದಂಗೆ ಏಳಿಸ್ತಾರಾ? ಅವರ ಪ್ರತಿಕೃತಿ ದಹನ ಮಾಡುತ್ತಾರಾ? ಅವರನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರಾ? ಎಂದು ಕೇಳಿದರು.

ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ. ಸಂವಿಧಾನದತ್ತ ಅಧಿಕಾರ ಬಳಸಿ, ಅವರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ತನಿಖೆಯನ್ನೇ ಯಾಕೆ ವಿರೋಧಿಸುತ್ತಿದೆ? ರಾಜ್ಯಪಾಲರು ಸಿದ್ಧರಾಮಯ್ಯನವರು ಅಪರಾಧಿ ಎಂದು ಹೇಳಿಲ್ಲ. ಎಂದು ಅವರು ಹೇಳಿದರು.
ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ ಮಾಡಿದ್ದಾರೆ. ಟೈರ್‌ಗಳನ್ನೂ ಸುಟ್ಟಿದ್ದಾರೆ. ಇವರು ಕರ್ನಾಟಕವನ್ನು ಏನು ಮಾಡಲು ಹೊರಟಿದ್ದಾರೆ?
ಈ ದೇಶದಲ್ಲಿ ಎರಡು ಬಾರಿ ಸಿಎಂ ಆದ, 40ವರ್ಷಗಳ ರಾಜಕೀಯ ಜೀವನದ ಅಗಾಧ ಅನುಭವವುಳ್ಳ ಸಿದ್ಧರಾಮಯ್ಯನವರು ಸೇರಿ ಯಾರು ಕೂಡ ಸಂವಿಧಾನಕ್ಕಿಂತ ಮೇಲಲ್ಲ. ಸಿದ್ದರಾಮಯ್ಯನವರು ಸಂವಿಧಾನಕ್ಕಿಂತ ಮೇಲೆ ಎಂದು ತಿಳಿದುಕೊಳ್ಳುವುದು ಅವರ ಅಹಂಕಾರವನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಐವನ್ ಎಂದರೆ ದೇವರ ಉಡುಗೊರೆ ಎಂದರ್ಥ .ಅವರ ಹೆಸರಿಗೂ ಅವರ ನಡೆಗೂ ಸಂಬಂಧವೇ ಇಲ್ಲ. ಐವನ್ ಎಂದು ಹೆಸರಿದ್ದರೂ ಇವರು ಹೈವಾನ್ ಅಂದರೆ ರಾಕ್ಷಸರ ಹಾಗೆ ವರ್ತಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಐವಾನ್ ಡಿಸೋಜ ಸೇರಿದಂತೆ ಯಾರ್ಯಾರು ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದರೋ, ಯಾರ್ಯಾರು ದಾಳಿ ಮಾಡುವುದಾಗಿ ಬೆದರಿಸಿದ್ದಾರೋ, ಭಯೋತ್ಪಾದಕರ ಥರ ಮಾತನಾಡಿದ್ದಾರೋ ಅವರ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಎಷ್ಟೋ ಪ್ರಕರಣಗಳಲ್ಲಿ ದೂರುದಾರರೇ ಇಲ್ಲದೆ, ನೀವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದೀರಿ, ಆದರೆ, ಇಲ್ಲಿ ಇನ್ನೂ ಯಾಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *