ಬೆಳ್ತಂಗಡಿ:(ಆ.21)ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದೆ. ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ತಾಲೂಕಿನ ನನ್ನ ಬಂಧುಗಳು ಜಾಗರೂಕರಾಗಿರುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ.
ಇದನ್ನೂ ಓದಿ: 🔶ಉಜಿರೆ: ಉಜಿರೆಯ ಶ್ರೀ ಧ. ಮಂ.ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ
ಜಿಲ್ಲಾಡಳಿತ ಹಾಗೂ ಭೂ ಶಾಸ್ತ್ರಜ್ಞರು ಈ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸ್ತುಸ್ಥಿತಿ ಬಗ್ಗೆ ವರದಿ ನೀಡಲಿದ್ದಾರೆ. ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಮಯಾಸಮಯವೆನ್ನದೆ ನನ್ನನ್ನು, ನನ್ನ ಕಚೇರಿಯನ್ನು ಅಥವಾ ಸ್ಥಳೀಯ ಬಿಜೆಪಿ ನಾಯಕರನ್ನು ಸಂಪರ್ಕಿಸಿ ಎಂದು ಹರೀಶ್ ಪೂಂಜ ರವರು ಮನವಿ ಮಾಡಿದ್ದಾರೆ.