Sat. Dec 14th, 2024

Brahmavara: ಪತ್ನಿಯನ್ನೇ ಕೊಂದ ಪತಿ – ಆ ಒಂದು ವಿಷಯವೇ ಕೊಲೆಗೆ ಕಾರಣವಾಯಿತಾ?

ಬ್ರಹ್ಮಾವರ:(ಆ.23) ಬೆಳ್ಳಂಬೆಳಿಗ್ಗೆ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಈ ಜಗಳ ತಾರಕಕ್ಕೇರಿ ಪತಿ ಪತ್ನಿಗೆ ಹೊಡೆದ ಪರಿಣಾಮ, ಪತ್ನಿ ಸಾವನ್ನಪ್ಪಿದ್ದಾರೆ ಎನ್ನಲಾದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಪಡುವಳಿ ಎಂಬಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.

ಇದನ್ನೂ ಓದಿ: ಬಂದಾರು ಗ್ರಾಮ ಪಂಚಾಯತ್ 2023-24 ನೇ ಸಾಲಿನ ಜಮಾಬಂದಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಹಾಗೂ

ಆರೋಪಿಯನ್ನು ಸಾಸ್ತಾನ ಗುಂಡ್ಮಿ ನಿವಾಸಿ ಕಿರಣ್ ಉಪಾಧ್ಯಾಯ(30) ಎಂದು ಗುರುತಿಸಲಾಗಿದೆ. ಆತನ ಪತ್ನಿ ಜಯಶ್ರೀ(28) ಮೃತ ದುರ್ದೈವಿ.

9 ತಿಂಗಳ ಹಿಂದಷ್ಟೇ ಕಿರಣ ಉಪಾಧ್ಯಾಯ ಹಾಗೂ ಜಯಶ್ರೀ ವಿವಾಹವಾಗಿತ್ತೆನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಕಾರ್ಕಡ ಪಡುವಳಿಯ ಮನೆಯಲ್ಲಿ ಬಾಡಿಗೆಯಲ್ಲಿ ವಾಸ ಮಾಡಿಕೊಂಡಿದ್ದರು. ಸ್ಥಳೀಯರು ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಇದರಿಂದಲೇ ಪತಿ ಪತ್ನಿಗೆ ಹಲ್ಲೆ ನಡೆಸಿದ್ದಾಗ ಪತ್ನಿ ಜಯಶ್ರೀ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನುತ್ತಿದ್ದಾರೆ.

ಜಯಶ್ರೀ ಮೃತ ದೇಹವನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು