ಉಜಿರೆ :(ಆ.23) ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯ ಬಾಲಕರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಇದನ್ನೂ ಓದಿ: 🛑ಬ್ರಹ್ಮಾವರ: ಪತ್ನಿಯನ್ನೇ ಕೊಂದ ಪತಿ!!
ಇವರಿಗೆ ದೈಹಿಕ ಶಿಕ್ಷಕರಾದ ನಿಶ್ಚಿತ್ ಹಾಗೂ ವಸಂತ್ ಇವರು ತರಬೇತಿ ನೀಡಿದ್ದು, ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.