ಬೆಳ್ತಂಗಡಿ:(ಆ.24) ಬೆಳಾಲಿನಲ್ಲಿ ನಿವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: 🛑ಚಿತ್ರದುರ್ಗ: ರೈಲಿನಲ್ಲಿ 34 ಲಕ್ಷ ರೂ. ಮೌಲ್ಯದ ಗಾಂಜಾ ವಶ
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು, ಮೃತ ಬಾಲಕೃಷ್ಣ ಭಟ್ ಅವರ ಕುಟುಂಬದ ಹತ್ತಿರದ ಸಂಬಂಧಿಗಳಾಗಿರುವ ಕೇರಳ ಕಾಸರಗೋಡಿನ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಒಬ್ಬ ಆರೋಪಿ ಕೇರಳದಲ್ಲಿ ಈ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಿದೆ ಎಂದು ತಿಳಿದು ಬಂದಿದೆ. ಅಪರಾಧ ಪ್ರಕರಣದಲ್ಲಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಜೀವಂತ ಇರುವವರೆಗೆ ಜಾಗ ಪಾಲು ಮಾಡಿ ಕೊಡುವುದಿಲ್ಲ ಎಂದು ಮೃತರು ಹೇಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕೃತ್ಯವನ್ನು ಎಸಗಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಕೊಲೆಯಲ್ಲಿ ಯಾರೆಲ್ಲ ಭಾಗಿಗಳಾಗಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಾಗಿದೆ.