ಕನ್ಯಾಡಿ:(ಆ.24) ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿಸಲಾಗಿತ್ತು.
ಇದನ್ನೂ ಓದಿ: 🛑ಕಾರ್ಕಳ: ಯುವತಿಗೆ ಅಮಲು ಪದಾರ್ಥ ನೀಡಿ ಮುಸ್ಲಿಂ ಯುವಕರಿಂದ ಕಾಡಿನಲ್ಲಿ ಗ್ಯಾಂಗ್ ರೇಪ್
ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವೆಂಬ ಹೆಗ್ಗಳಿಕೆ ಗಳಿಸಿತ್ತು . ಅಲ್ಲದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತವೆಂಬ ಅಭಿದಾನಕ್ಕೂ ಪ್ರಾಪ್ತವಾಗಿತ್ತು. ಇದರ ಪ್ರಯುಕ್ತ “ರಾಷ್ಟ್ರೀಯ ಬಾಹ್ಯಾಕಾಶ ದಿನ” ವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಯಲ್ಲಿ ಆಚರಿಸಲಾಯಿತು.
ಆ ಪ್ರಯುಕ್ತ ಮಕ್ಕಳಿಂದ ಈ ದಿನದ ವಿಶೇಷತೆ ಕುರಿತು ಮಾಹಿತಿ ಚಿತ್ರ ಕಲೆ ಮತ್ತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಹತ್ತು ತಂಡಗಳಲ್ಲಿ ತಲಾ ಎರಡು ತಂಡಗಳು ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದರು.
ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಲ್ಲಿ ಬಹಳ ಅರ್ಥವತ್ತಾಗಿ ಆಚರಿಸಲಾಯಿತು.