Wed. Nov 20th, 2024

Karkala gang rape case: ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ.! – ಪ್ರಕರಣದ ಬಗ್ಗೆ ಎಸ್ಪಿ ಅರುಣ್‌ ಹೇಳಿದ್ದೇನು?

ಉಡುಪಿ :(ಆ.26) ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ರಕ್ತಪರೀಕ್ಷೆ ವರದಿ ಬಂದಿದ್ದು, ಈ ವರದಿಯ ಪ್ರಕಾರ ಆಕೆಯ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢಪಟ್ಟಿದೆ.

ಇದನ್ನೂ ಓದಿ: 🔶Krishna Janmashtami: ಕೃಷ್ಣ ಜನ್ಮಾಷ್ಟಮಿ ಪೂಜೆ ವಿಧಾನಗಳು

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಪ್ರಕರಣ ಅತ್ಯಾಚಾರ, ಲವ್ ಜಿಹಾದ್ ಮತ್ತು ಡ್ರಗ್ಸ್ ಜಿಹಾದ್ ನ ಇನ್ನೊಂದು ಭಾಗ ಎಂದು ಹಿಂದೂ ಸಂಘಟನೆಗಳು ಆರೋಪಿಸಿದೆ.

ಘಟನೆಯನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳ ವಿರುದ್ಧಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ. ಘಟನೆಯನ್ನು ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿ ಕಾರ್ಕಳ ವತಿಯಿಂದ ನಡೆಯುವ ಖಂಡನಾ ಮೆರವಣಿಗೆ ಮತ್ತು ಸಭೆಯಲ್ಲಿ ಹಿಂದು ಸಮಾಜದ ಎಲ್ಲಾ ಬಂಧುಗಳು ಭಾಗವಹಿಸಬೇಕಾಗಿ ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ವಿನಂತಿಸಿಕೊಂಡಿದ್ದಾರೆ.

ಅತ್ಯಾಚಾರ ಎಸಗಿರುವ ಆರೋಪಿಗಳಾದ ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ. ಯುವತಿ ರಕ್ತದಲ್ಲಿ ಪಾಸಿಟಿವ್‌ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್ ನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ ಆ ಹುಡುಗಿ ತೆಗೆದುಕೊಂಡಿದ್ದು ಎಂದು ತಿಳಿಸಿದ್ದಾನೆ.

ಬಳಿಕ ಆರೋಪಿ ಅಲ್ತಾಫ್ ತೋರಿಸಿದ ಪುಡಿಯನ್ನು ಪೊಲೀಸರು ಎಫ್ಎಸ್‌ಎಲ್‌ ಗೆ ಕಳುಹಿಸಲಾಗಿದ್ದು, ಅದು ಯಾವ ಡ್ರಗ್ಸ್‌ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಸಂತ್ರಸ್ತೆಯ ರಕ್ತದಲ್ಲಿ ಪತ್ತೆಯಾಗಿರುವುದು ಇದರದ್ದೇ ಅಂಶವೇ ಎಂಬ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ.ಅರುಣ್‌ ತಿಳಿಸಿದ್ದಾರೆ.

Leave a Reply

Your email address will not be published. Required fields are marked *