Wed. Apr 16th, 2025

Rakshit Shivaram: ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

ಬೆಳ್ತಂಗಡಿ:(ಆ.26) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು,

ಇದನ್ನೂ ಓದಿ: 🛑ಬೆಳ್ತಂಗಡಿ: ಆಗಸ್ಟ್ 28 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸಂಬಂದಿಸಿದ ಕಾರ್ಯಚಟುವಟಿಕೆಗಳು ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನ ,ವಿವಿಧ ಚುನಾವಣೆಗಳು ,ಸದಸ್ಯತ್ವ ನೊಂದಣಿ ,ಬೂತ್ ಸಮಿತಿಗಳ ರಚನೆ ಮತ್ತು ನಿರ್ವಹಣೆ ,ಹಾಗೂ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುವ ಎಲ್ಲಾ ಕಾರ್ಯಚಟುವಟಿಕೆಗಳನ್ನು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ನಿರ್ವಹಿಸಲು ಜವಾಬ್ದಾರಿ ನೀಡಲಾಗಿದೆ.

Leave a Reply

Your email address will not be published. Required fields are marked *