Sat. Apr 19th, 2025

Mogru: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ – ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ – ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬ ಲೋಗೋ ಅನಾವರಣ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮೊಗ್ರು: (ಆ.27) ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ

ಇದನ್ನೂ ಓದಿ: 🔶ನವದೆಹಲಿ: ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

3ನೇ ವರ್ಷ ದ ಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮ ಶ್ರೀ ರಾಮ ಶಿಶು ಮಂದಿರ ಆವರಣ ದಲ್ಲಿ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ ಮೊಸರು ಕುಡಿಕೆ, ಶಿಶು ಮಂದಿರದ ಪುಟಾಣಿ ಗಳಿಂದ ಸಾoಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಹಾಗೂ 2025ರಲ್ಲಿ ನಡೆಯುವ ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬ ಲೋಗೋ ಅನಾವರಣ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಶಿಶುಮಂದಿರ ಯು ಜಿ ರಾಧಾ ಭಟ್, ಸಂಚಾಲಕರಾದ ರಮೇಶ್ ನೆಕ್ಕರಾಜೆ, ನಿವೃತ್ತ ಶಿಕ್ಷಕರರಾದ ಸತ್ಯಶಂಕರ ಭಟ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖoಡಿಗ , ಮಾತೃ ಮಂಡಳಿ ಅಧ್ಯಕ್ಷೆ ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಹಲವಾರು ವರ್ಷ ಮೊಗ್ರು ಗ್ರಾಮದಲ್ಲಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆ ಗೊಂಡಿರುವ ಪವರ್ ಮ್ಯಾನ್ ಸಂದೀಪ್ ಎಂ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪಡೆದ ಯುವಸಾಹಿತಿ ಚಂದ್ರಹಾಸ ಕುಂಬಾರ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *