Wed. Nov 20th, 2024

Mysore: ರಾಜ ಕಾಲುವೆ ಮೇಲಿದ್ದ ಕೊರಗಜ್ಜ ದೈವಸ್ಥಾನ ನೆಲಸಮ

ಮೈಸೂರು :(ಆ.27) ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೈವಸ್ಥಾನವನ್ನು ಮೈಸೂರು ಜಿಲ್ಲಾಡಳಿತ ನೆಲಸಮ ಮಾಡಿದೆ.

ಇದನ್ನೂ ಓದಿ: 🔶ಮುಂಡಾಜೆ : ರಾಜ್ಯ ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ


ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ ಆರ್ ರಕ್ಷಿತ್ ಅವರ ಆದೇಶದಂತೆ ತಹಶೀಲ್ದಾರ್ ಕೆ ಎಂ ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೈವಸ್ಥಾನವನ್ನು ನೆಲಸಮ ಮಾಡಿದ್ದಾರೆ.


ಕೇರ್ಗಳ್ಳಿ ಗ್ರಾಮದ ಸರ್ವೆ ನಂಬರ್ 60ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು. ಮಾತ್ರವಲ್ಲ, ಅಕ್ರಮವಾಗಿ ದೈವಸ್ಥಾನ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು.


ಈ ಸಂಬಂಧ ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ರಕ್ಷಿತ್ ಅವರು ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ ಹಾಗೂ ಒತ್ತುವರಿಯನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ.


ಅದರನ್ವಯ ತಹಶೀಲ್ದಾರ್ ಕೆ ಎಂ ಮಹೇಶ್ ಕುಮಾರ್ ಅವರು ಜಯಪುರ ಠಾಣೆ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕೊರಗಜ್ಜ ದೈವಸ್ಥಾನವನ್ನು ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಜಯಪುರ ಹೋಬಳಿ ಉಪತಹಶೀಲ್ದಾರ್ ನಿಂಗಪ್ಪ, ರಾಜಸ್ವ ನಿರೀಕ್ಷಕ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು, ಬೋಗಾದಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಿಬಂದಿ ವರ್ಗದವರು, ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ಜಯಪುರ ಪೋಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *