Wed. Feb 5th, 2025

Belthangadi: ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ‌ಗೌಡ ಆಯ್ಕೆ

ಬೆಳ್ತಂಗಡಿ:(ಆ.28) ಬೆಳ್ತಂಗಡಿ ಪಟ್ಟಣ ಪಂಚಾಯತ್‌ ನ ನೂತನ ಅಧ್ಯಕ್ಷರಾಗಿ ಜಯಾನಂದ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೌರಿ ಅವರು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: 🔴ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಗ್ರಾಮ ಸಭೆ

ಬೆಳ್ತಂಗಡಿ ಪಟ್ಟಣ ಪಂಚಾಯತ್‌ ನಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿತ್ತು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದು, ಇವರಿಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಗಿರುವುದಾಗಿ ಚುನಾವಣಾ ಅಧಿಕಾರಿ ತಹಶೀಲ್ದಾರ್ ಅವರು ಪ್ರಕಟಿಸಿದರು.

ಈ ಸಂದರ್ಭದಲ್ಲಿ ದ.ಕ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *