Sat. Apr 19th, 2025

Kadaba: ಶಾಲಾ ಕಟ್ಟಡ ಕುಸಿದು ವಿದ್ಯಾರ್ಥಿಗಳಿಗೆ ಗಾಯ – ಇಂಜಿನಿಯರ್, ಮುಖ್ಯಶಿಕ್ಷಕ ಅಮಾನತು!

ಕಡಬ :(ಆ.28) ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ಮಂಗಳವಾರ ನಡೆದಿತ್ತು.

ಇದನ್ನೂ ಓದಿ: 🔴ಗುರುವಾಯನಕೆರೆ: ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ 2 ನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

ಈ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ.

ಶಾಲಾ ಕಟ್ಟಡದ ಒಂದು ಭಾಗ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ಹೆಚ್ಚಿನ ವಿದ್ಯಾರ್ಥಿಗಳು ಆ ಸಮಯದಲ್ಲಿ ಶಾಲಾ ಮೈದಾನದಲ್ಲಿ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಏಳನೇ ತರಗತಿಯ ರಶ್ಮಿ, ದೀಕ್ಷಾ, ಫಾತಿಮಾ, ಸುಹಾನಾ ಮತ್ತು ಯಶಿತಾ ಎಂದು ಗುರುತಿಸಲಾಗಿದೆ.

ಶಾಲಾ ಕಟ್ಟಡದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅಗೆಯುವ ಯಂತ್ರ ಬಳಸಿ ಟ್ರೆಂಚ್ ತೋಡುತ್ತಿದ್ದ ವೇಳೆ ಕುಸಿತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು, ಆದರೆ ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ.

ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *