Sat. Dec 7th, 2024

Daily Horoscope – ಇಂದು ಈ ರಾಶಿಯವರಿಗೆ ಮಿತ್ರರೇ ಶತ್ರುಗಳಾಗಬಹುದು!!!

Daily Horoscope - ಇಂದು ಈ ರಾಶಿಯವರಿಗೆ ಆತುರವೇ ಅಪಾಯ ತಂದೊಡ್ಡಬಹುದು

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪುರ್ವಸು, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:45 ಗಂಟೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:39, ಯಮಘಂಡ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:27 ರಿಂದ 11:00ರ ವರೆಗೆ.

ಮೇಷ ರಾಶಿ: ಇಂದು ಶ್ರಮಪಟ್ಟು ಮಾಡಿದ ಕೆಲಸವು ಕೊನೆಯ ಕ್ಷಣದಲ್ಲಿ ಹಾಳಾಗಬಹುದು. ಎಂದೋ ಬಳಸಿದ್ದನ್ನು ಇಂದು ಪಡೆಯುವಿರಿ. ನಿರುದ್ಯೋಗವು ನಿಮ್ಮ ಮನಸ್ಸಿಗೆ ಬಹಳ ಕಿರಿಕಿರಿಯಾಗಲಿದೆ. ಆಸಕ್ತಿಕರ ವಿಚಾರವನ್ನು ನೀವು ಯಾರ ಬಳಿ ಹೇಳಿಕೊಳ್ಳುತ್ತೀರಿ.

ವೃಷಭ ರಾಶಿ; ಇಂದು ನಿಮ್ಮ ಹಣವು ಯಾವುದೋ ಒಂದು ರೀತಿಯಲ್ಲಿ ಖರ್ಚಾಗುವ ಸಾಧ್ಯತೆ ಇದ್ದು, ಅದನ್ನು ನಿಭಾಯಿಸಿ. ದೇವರ ಉಪಾಸನೆಯಲ್ಲಿ ಆಲಸ್ಯವು ಅಧಿಕವಾಗುವುದು. ನಿಮ್ಮ ಮಾತಿನಿಂದ ಇನ್ನೊಬ್ಬರಿಗೆ ಬೇಸರಗವಾಗಲಿದ್ದು ಗೊತ್ತಾದ ಕೂಡಲೆ ಅದನ್ನು ನಿಲ್ಲಿಸಿ. ನಿಯಮ ಉಲ್ಲಂಘನೆ‌ ಮಾಡಿ ದಂಡ ತುಂಬುವಿರಿ.

ಮಿಥುನ ರಾಶಿ; ಯೋಚನೆಯ ದಿಕ್ಕನ್ನು ಬದಲಿಸಿದರೆ ತೊಂದರೆಗಳಿಗೆ ಉತ್ತರವೂ ಸಿಗಲಿದೆ. ಇಂದು ಸರಿ ಮಾಡಲು ಸಾಧ್ಯವಾಗುವಷ್ಟು ನಿಮ್ಮ ಮನಸ್ಸು ಕೆಡಲಿದೆ. ಲೆಕ್ಕಾಚಾರದ ವಿಷಯದಲ್ಲಿ ನೀವು ಹಿಂದುಳಿದಿರುವುದು ಎಲ್ಲರಿಗೂ ಗೊತ್ತಾಗುವುದು.

ಕರ್ಕಾಟಕ ರಾಶಿ: ಇಂದು ನಿಮ್ಮ ಮನೆಯ ಹಿರಿಯರ ಸೇವೆಯಿಂದ ನೆಮ್ಮದಿ ಸಿಗುವುದು. ನೀವು ಯಾರದ್ದಾದರೂ ಬಾಯಿಗೆ ವಿಷಯವಾಗಿದೆ. ಯಂತ್ರಗಳ ಕೆಲಸವು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು.

ಸಿಂಹ ರಾಶಿ; ಬದಲಾದ ನಿಮ್ಮ ವ್ಯಕ್ತಿತ್ವವೇ ನಿಮಗೆ ಅಚ್ಚರಿ ಮೂಡಿಸಬಹುದು. ನಿಮಗೆ ಕೇಳಿದ ಮಾತುಗಳು ಅಪಮಾನಕರವಾಗಿದ್ದು ಏನನ್ನಾದರೂ ಎಂಬ ಹಂಬಲವನ್ನು ಅತಿಯಾಗಿಸುವುದು. ಹಿರಿಯರ ಹಿತಕ್ಕಾಗಿ ನೀವು ನಿಮ್ಮ ಕಾರ್ಯಗಳನ್ನು ಬದಲಿಸಬೇಕು.

ಕನ್ಯಾ ರಾಶಿ; ಇಂದು ಮಾಡುವ ಕಾರ್ಯವು ನಿಮ್ಮ ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡುವುದು. ಕೊಟ್ಟ ಮಾತಿಗೆ ಸರಿಯಾಗಿ ನಡೆದುಕೊಳ್ಳಬೇಕಾಗುವುದು. ಸಿಗದೇ ಇರುವುದರ ಬಗ್ಗೆ ನಿಮಗೆ ಮೋಹ ಬೇಡ. ಇನ್ನೂ ಉತ್ತಮವಾದುದು ಸಿಗುತ್ತದೆ ಎಂಬ ಭರವಸೆಯನ್ನು ಇಟ್ಟುಕೊಳ್ಳಿ

ತುಲಾ ರಾಶಿ: ಇಂದು ನಿಮಗೆ ಒಳ್ಳೆಯತನಕ್ಕೆ ಯಾವ ಫಲವಿಲ್ಲ ಎಂಬ ಬೇಸರವಿದೆ. ಇಷ್ಟವಿಲ್ಲದಿದ್ದರೂ ಕೆಲವನ್ನು ನೀವು ಮಾಡಬೇಕಾಗಬಹುದು. ಎಲ್ಲ ನಿರರ್ಥಕ ಎನ್ನುವ ಭಾವನೆಯು ನಿಮ್ಮಲ್ಲಿ ಬರಬಹುದು.

ವೃಶ್ಚಿಕ ರಾಶಿ; ಭವ್ಯ ಗೃಹದ ಕನಸನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ಮಕ್ಕಳ ಮೇಲೆ ಅಕ್ಕರೆ ಬಂದೀತು. ವಿರೋಧಿಗಳ ನಡೆಯೇ ನೀವು ನಿಮ್ಮ ನಡೆಯನ್ನು ಬಿಡಲು ಒಪ್ಪುವುದಿಲ್ಲ. ಕಾರ್ಯಗಳನ್ನು ಹಂಚಿಕೆ ಮಾಡಿ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು.

ಧನು ರಾಶಿ; ಇಂದು ನಿಮ್ಮ ನಡತೆಯು ಸಾಮಾನ್ಯರಂತೆ ಕಂಡರೂ ಪ್ರಭಾವವು ಅಧಿಕವಾಗಿದೆ. ಬಹಳ ದಿನಗಳ ಅನಂತರ ನಿಮಗೆ ಒಳ್ಳೆಯ ಪ್ರೀತಿ ದೊರೆಯಲಿದೆ. ಇದು ನಿಮ್ಮ ಸಂತೋಷವನ್ನು ಹೆಚ್ಚು ಮಾಡುವುದು.

ಮಕರ ರಾಶಿ; ನಿಮ್ಮ ಕಾರ್ಯದ ದಕ್ಷತೆಯಿಂದ ಉನ್ನತ ಸ್ಥಾನವು ಸಿಗುವುದು. ನಿಮ್ಮ ಸಣ್ಣ ಕಾರ್ಯವನ್ನೂ ದೊಡ್ಡದಾಗಿ ಬಿಂಬಿಸುವಿರಿ. ಎಲ್ಲರ ಜೊತೆ ಪ್ರೀತಿಯಿಂದ ಮಾತನಾಡಲು ಇಷ್ಟಪಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡುವವರನ್ನು ಹೆಚ್ಚು ಇಷ್ಟಪಡುವಿರಿ. ಸ್ವಾರ್ಥವನ್ನು ಬಿಟ್ಟು ಕೆಲಸ ಮಾಡಿದರೆ ಹೆಚ್ಚು ಒಳ್ಳೆಯದು.

ಕುಂಭ ರಾಶಿ: ಇಂದು ನಿಮ್ಮ ಅವಶ್ಯಕತೆ ತಿಳಿಯುವುದು. ಸಂಗಾತಿಯನ್ನು ಬಿಟ್ಟು ಇರುವುದು ನಿಮಗೆ ಕಷ್ಟಕರವಾದೀತು. ನಿಮ್ಮ ಮಾತುಗಳಿಂದ ಪೀಡಿಸಬಹುದು. ಆದರೆ ಇಂದು ಮೌನವೇ ಹೆಚ್ಚು ಪ್ರಿಯವಾದೀತು. ನಿಮ್ಮ ಎರಡು ಬಗೆಯ ಮನಃಸ್ಥಿತಿಯು ಕೆಲವರಿಗೆ ಇಷ್ಟವಾಗದೇ ಹೋದೀತು.

ಮೀನ ರಾಶಿ; ಇಂದು ನೀವು ಭೂಮಿಯ ವಿಚಾರವಾಗಿ ಕಲಹವನ್ನು ಮಾಡುತ್ತೀರಿ. ಕಡಿಮೆ ಸ್ನೇಹಿತರನ್ನು ಹೊಂದಿದ್ದರೂ ಅವರನ್ನು ಬಹಳ ಚೆನ್ನಾಗಿ ಇಟ್ಟುಕೊಳ್ಳುವಿರಿ. ವಿದ್ಯೆಯೇ ನಿಮಗೆ ನೆರವಾಗುವುದು. ಅನಗತ್ಯ ಕಾರ್ಯಗಳತ್ತ ಮನಸ್ಸು ಹೋದರೂ ಮತ್ತೆ ಕಾರ್ಯದಲ್ಲಿ ಮಗ್ನರಾಗಿರಿ. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ಮತ್ತೆ ನೆನಪಿಸಿ ಮುಜುಗರವನ್ನು ಉಂಟುಮಾಡುವಳು.

Leave a Reply

Your email address will not be published. Required fields are marked *