Wed. Feb 5th, 2025

Darshan Thoogudeepa : ದಾಸ ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು:(ಆ.29) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: 💥ಉಪ್ಪಿನಂಗಡಿ : ಅವಾಚ್ಯವಾಗಿ ಬೈದು ಹಲ್ಲೆ ಆರೋಪ

ನಸುಕಿನ ವೇಳೆ 4.30ಕ್ಕೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಟು ಬೆಳಿಗ್ಗೆ 9.45ರ ಸುಮಾರಿಗೆ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.


ನಿಯಮದ ಪ್ರಕಾರ ರಾತ್ರಿ ವೇಳೆ ವಿಚಾರಣಾದೀನ ಕೈದಿಗಳನ್ನು ಸ್ಥಳಾಂತರ ಮಾಡುವಂತಿಲ್ಲ. ಆದರೆ ಭದ್ರತಾ ದೃಷ್ಟಿಯಿಂದ ದರ್ಶನ್​ರನ್ನು ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆದುಕೊಂಡು ಹೊರಡಲಾಗಿತ್ತು. ಇದೀಗ ದರ್ಶನ್​​ ಕರೆದುಕೊಂಡು ಹೊರಟಿದ್ದ ಪೊಲೀಸ್ ವಾಹನ ಬಳ್ಳಾರಿ ಜೈಲು ತಲುಪಿವೆ.


ದರ್ಶನ್ ನೋಡಲು ಬಳ್ಳಾರಿ ಜೈಲಿನ ಬಳಿ ಅಭಿಮಾನಿಗಳು ಜಮಾಯಿಸಿದ್ದರು. ದರ್ಶನ್​ ಇದ್ದ ವಾಹನ ಬರುತ್ತಿದ್ದಂತೆಯೇ, ದರ್ಶನ್, ದರ್ಶನ್ ಎಂದು ಅಭಿಮಾನಿಗಳು ಕೂಗಿದ್ದಾರೆ. ಈ ವೇಳೆ ಕೆಲವು ಅಭಿಮಾನಿಗಳಿಗೆ ಪೊಲೀಸರು ಏಟು ಕೊಟ್ಟಿದ್ದಾರೆ.


ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಬಿಂದಾಸ್‌ ಆಗಿರುವ ಫೋಟೊ ವೈರಲ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೇರೆ ಜೈಲಿಗೆ ಶಿಫ್ಟ್‌ ಮಾಡಬೇಕೆಂಬ ನಿರ್ಣಯಕ್ಕೆ ಬರಲಾಗಿತ್ತು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು