ಬೆಂಗಳೂರು: (ಆ.30) ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ಸಹಿತ ಮೂರು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ , ಪ್ರಕರಣದ ಮರುತನಿಖೆ ಕೋರಿ ಸೌಜನ್ಯಳ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿ ಹಾಗೂ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.
ನ್ಯಾಯಾಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ಜೆ. ಎಂ.ಖಾಜಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ.