ಮಂಗಳೂರು:(ಆ.30) ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಇದನ್ನೂ ಓದಿ: 🟠ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ
1.ಶಾಜಹಾನ್. ಪಿ.ಎಂ(32), ವಾಸ: ಕೀಯೂರ್ ಹೌಸ್, ಚಂದ್ರಗಿರಿ ಪೋಸ್ಟ್, ಕಳನಾಡು, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ.
2.ಮೊಹಮ್ಮದ್ ನಿಶಾದ್(27), ವಾಸ: ದೇವರಡ್ಕ ಹೌಸ್, ಅಡೂರು, ದೇಲಂಪಾಡಿ ಪೋಸ್ಟ್, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ. ಹಾಲಿ ವಾಸ: ರೂಮ್ ನಂಬ್ರ 305, ಸಾರಾ ಟವರ್, ಈಜಿಪುರ, ಕೋರಮಂಗಲ, 5ನೇ ಬ್ಲಾಕ್, ಬೆಂಗಳೂರು.
3.ಮನ್ಸೂರು ಎಂ.ಎಂ(27), ವಾಸ: ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬೆ ಪಾಲ್ಸ್ ಗೆ ಹೋಗುವ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ಹಾಲಿ ವಾಸ: ಎಸ್.ಎಲ್.ವಿ ಬಾಯ್ಸ್ ಪಿಜಿ, 28 ನೇ ಮುಖ್ಯರಸ್ತೆ, 7 ನೇ ಅಡ್ಡರಸ್ತೆ, ಮಾರುತಿ ನಗರ, ಬಿಟಿಎಂ 1ಸ್ಟೇಜ್, ಮಡಿವಾಳ, ಬೆಂಗಳೂರು.
ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ 2,10,000/- ರೂ ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 12,18,500/- ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಹೊಸ ಕಾರನ್ನು ಬಾಡಿಗೆಗೆ ಪಡೆದುಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ.
ಆರೋಪಿಗಳ ಪೈಕಿ ಶಾಜಹಾನ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆ ಮೇಲ್ಪರಂಬ, ಬೇಕಲಂ, ವಿದ್ಯಾನಗರ, ಕುಂಬಳೆ, ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ/ಸೇವನೆಗೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ನಿಶಾದ್ ಎಂಬಾತನ ವಿರುದ್ಧ ಪುತ್ತೂರು ನಗರ ಹಾಗೂ ಮಡಿಕೇರಿ ಪೊಲೀಸ್ ಠಾಣೆಯಲ್ಲಿ 2 ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.