Sat. Apr 19th, 2025

Mangaluru: ಯುವತಿ ಮೇಲೆ ಹಲ್ಲೆ ಮಾಡಿದ ಪ್ರಭಾವಿ ತಂಡ – ಯುವತಿ ಕೇಸ್ ನೀಡಿದ್ರೂ ರೆಸ್ಪಾನ್ಸ್‌ ಮಾಡದ ಪೋಲಿಸರು

ಮಂಗಳೂರು:(ಆ.30) ಯುವಕರ ತಂಡವೊಂದು ನಗರದ ಲಾಲ್‌ಬಾಗ್‌ನ ಹೋಟೆಲ್ ಒಂದರ ಬಳಿ ತನ್ನ ಮೇಲೆ ಹಲ್ಲೆ ಮಾಡಿದೆ. ಎಂದು ಯುವತಿಯೋರ್ವಳು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರೂ, ಯಾವುದೇ ಕ್ರಮ ಆಗಿಲ್ಲ ಎಂದು ಆರೋಪಿಸಿರುವ ವಿಡಿಯೋ ಇದೀಗ ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: 🛑Menstrual Cramp: ಮುಟ್ಟಿನ ನೋವು ನಿವಾರಿಸಲು ಮಾತ್ರೆ ತೆಗೆದುಕೊಂಡ ಯುವತಿ

ಯುವತಿಯು ರವಿವಾರ ರಾತ್ರಿ 9.30ಕ್ಕೆ ಮನೆಯವರೊಂದಿಗೆ ಹೋಟೆಲ್‌ಗೆ ಹೋಗಿದ್ದು, ರಾತ್ರಿ 11 ಗಂಟೆಗೆ ಊಟ ಮುಗಿಸಿ ಬಿಲ್ ಕೊಟ್ಟಿದ್ದೇವೆ. ಈ ವೇಳೆ ವಾಶ್‌ರೂಂಗೆ ಹೋದಾಗ ಅಲ್ಲಿ ಮಹಿಳಾ ಶೌಚಾಲಯದಲ್ಲಿ ಪುರುಷನೊಬ್ಬ ಇದ್ದ. ಅಲ್ಲಿಂದ ಹೊರ ಬಂದಾಗ ಅಲ್ಲಿದ್ದ ಇತರ ಇಬ್ಬರು ಅಸಭ್ಯವಾಗಿ ತಮಾಷೆ ಮಾಡಿದ್ದಾರೆ. ಈ ಬಗ್ಗೆ ಕ್ಯಾಶ್ ಕೌಂಟರ್ ತಿಳಿಸಿದ್ದು, ಕ್ಷಮೆ ಕೇಳಿ ಸಮಸ್ಯೆ ಅಲ್ಲಿಗೆ ಇತ್ಯರ್ಥವಾಗಿತ್ತು. ಬಳಿಕ ಪಾರ್ಕಿಂಗ್ ಸ್ಥಳಕ್ಕೆ ಬಂದಾಗ ಕಾರ್‌ನ ಹಿಂದೆ ಬುಲೆಟ್ ಬೈಕ್ ಪಾರ್ಕ್ ಮಾಡಲಾಗಿತ್ತು.

ರಿವರ್ಸ್ ತೆಗೆಯುವಾಗ ಬೈಕ್‌ನಲ್ಲಿದ್ದಾತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅದಕ್ಕೆ ತನ್ನ ಜತೆಗಿದ್ದವರು ಆತನನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದಿದೆ. ಸ್ಥಳದಲ್ಲಿ 15-20 ಮಂದಿ ಸೇರಿದ್ದಾರೆ. ಅದರಲ್ಲಿ ಒಬ್ಬ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ತಾನು ಪ್ರಶ್ನಿಸಿದಾಗ ಹಿಂದಕ್ಕೆ ದೂಡಿದ್ದಾರೆ. ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದಾಗ ಮತ್ತೊಬ್ಬ ಬಂದು ಹೊಡೆದಿದ್ದು, ಇನ್ನೊಬ್ಬಾತ ಬಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ವೀಡಿಯೋದಲ್ಲಿ ಆರೋಪಿಸಿದ್ದಾಳೆ.

ಇನ್ನು ಈ ಘಟನೆಗೆ ಸಂಬಂಧಿಸಿ ಯುವತಿಯು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು, ಕಾಲ್ ಬ್ಯುಸಿ ಬಂದ ಹಿನ್ನೆಲೆಯಲ್ಲಿ ಪಾಂಡೇಶ್ವರ ಮಹಿಳಾ ಠಾಣೆಗೆ ಹೋಗಿದ್ದಾರೆ. ಅಲ್ಲಿ ಬರ್ಕೆ ಠಾಣೆಗೆ ದೂರು ನೀಡುವಂತೆ ತಿಳಿಸಿದ್ದು, ಅದರಂತೆಯೇ ಆಕೆ ಬರ್ಕೆಯಲ್ಲಿ ಈ ಬಗ್ಗೆ ದೂರು ನೀಡಲಾಗಿತ್ತು. ಎಫ್‌ಐಆರ್ ಕೂಡಾ ದಾಖಲಾಗಿದೆ.


ನಮಗೆ ಹಲ್ಲೆ ಮಾಡಿದವರು ಪ್ರಭಾವಿ ವ್ಯಕ್ತಿಗಳಾಗಿರುವುದರಿಂದ ಜೀವ ಬೆದರಿಕೆಯನ್ನು ಹಾಕಿದ್ದಾರೆ. ಪೊಲೀಸರು ಈ ಬಗ್ಗೆ ಸರಿಯಾಗಿ ತನಿಖೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಬೇಕು ಎಂದು ಯುವತಿ ವಿಡಿಯೋದಲ್ಲಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *