Tue. Apr 8th, 2025

Udupi: ಶ್ರೀ ಕೃಷ್ಣಮಠಕ್ಕೆ ತೆಲುಗು ಚಿತ್ರರಂಗದ ಪ್ರಸಿದ್ದ ನಟ ಜ್ಯೂ.ಎನ್‌ಟಿಆ‌ರ್ ಭೇಟಿ

ಉಡುಪಿ :(ಸೆ.1) ಶ್ರೀ ಕೃಷ್ಣಮಠಕ್ಕೆ ತೆಲುಗು ಚಿತ್ರರಂಗದ ಪ್ರಸಿದ್ದ ನಟ ಜ್ಯೂನಿಯರ್ ಎನ್‌ಟಿಆ‌ರ್ ಅವರು ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.

ಇದನ್ನೂ ಓದಿ: 🔶ಉಜಿರೆ: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮ

ತಾಯಿ ಶಾಲಿನಿ ನಂದಾಮುರಿ ಅವರೊಂದಿಗೆ ಉಡುಪಿಗೆ ಆಗಮಿಸಿದ್ದ ಅವರು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ, ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.

ಶಾಲಿನಿ ನಂದಮುರಿ ಅವರು 40 ವರ್ಷಗಳ ಹಿಂದೆ ಪುತ್ರನನ್ನು ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಕರೆದುಕೊಂಡು ಬರಬೇಕು ಎಂಬ ಕನಸು ಕಂಡಿದ್ದರಂತೆ. ಇದೀಗ ಈ ಕನಸು ನೆರವೇರಿದೆ ಎಂದು ಶ್ರೀ ಮಠದ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ. ಈ ವೇಳೆ ನಟ ರಿಷಬ್ ಶೆಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *