Wed. Nov 20th, 2024

KPSC Exam: KPSC ಪರೀಕ್ಷೆಯಲ್ಲಿ ಕನ್ನಡ ಅನುವಾದದಲ್ಲಿ ಎಡವಟ್ಟು ಹಿನ್ನೆಲೆ – ಮರು ಪರೀಕ್ಷೆ ನಡೆಸಲು ಸಿಎಂ ನಿರ್ದೇಶನ

ಬೆಂಗಳೂರು:(ಸೆ.2) ಕೆಪಿಎಸ್ ಸಿ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು ಆಗಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸೂಚಿಸಿದೆ.

ಎರಡು ತಿಂಗಳುಗಳ ಒಳಗೆ ಪರೀಕ್ಷೆ ನಡೆಸುವಂತೆ ಕೆಪಿಎಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: 🛑ಮಂಗಳೂರು: ವಿಮಾನದಲ್ಲಿ ಸಿಗರೇಟು ಸೇದಿತಾನ ವಿರುದ್ಧ ಪ್ರಕರಣ ದಾಖಲು


ಕೆಪಿಎಸ್‌ ಸಿಯ ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆಯಲ್ಲಿ ಕನ್ನಡ ಅನುವಾದದಲ್ಲಿ ಎಡವಟ್ಟುಗಳಾಗಿದ್ದು, ಪರೀಕ್ಷಾರ್ಥಿಗಳು ಪರೀಕ್ಷೆ ವೇಳೆ ತೀವ್ರ ಗೊಂದಲಕ್ಕೊಳಗಾಗಿ ಸಮಸ್ಯೆ ಎದುರಿಸಿದ್ದರು.

ತಪ್ಪು ಮಾಡಿದವರ ಮೇಲೆ ಈಗಾಗಲೇ ಕ್ರಮ ವಹಿಸಲಾಗಿದ್ದು, ಮುಂದಿನ ಮರು ಪರೀಕ್ಷೆಯನ್ನು ಜವಾಬ್ದಾರಿಯುತವಾಗಿ ನಡೆಸುತ್ತೇವೆ ಎಂದು ಟ್ವೀಟ್ ಮೂಲಕ ಸಿಎಂ ಆಶ್ವಾಸನೆ ನೀಡಿದ್ದಾರೆ. 384 ಹುದ್ದೆಗಳಿಗೆ ನಡೆದಿದ್ದ ಪರೀಕ್ಷೆಯಲ್ಲಿ 1,31, 885 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

Leave a Reply

Your email address will not be published. Required fields are marked *