ಕಲಬುರಗಿ :(ಸೆ.3) ಮೆಡಿಕಲ್ ಸೀಟ್ ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: 🔵ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ
ಶ್ವೇತಾ ಅಪ್ಪಾಸಾಬ್ ಗುಣಾರಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ.
ನೀಟ್ ಪರೀಕ್ಷೆ ಬರೆದರೂ ಕೂಡ ಮೆಡಿಕಲ್ ಸೀಟ್ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.