ಮೇಷ ರಾಶಿ : ನಿಮ್ಮ ಪಾಲಿಗೆ ಬರಬೇಕಾದುದು ಬಂದೇಬರುತ್ತದೆ. ಇಂದು ನೀವು ವಿವಾದಗಳಿಗೆ ಆತಂಕಪಡುವಿರಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು.
ವೃಷಭ ರಾಶಿ : ದುಡುಕಿ ಮಾತನಾಡಿ ಬರಬೇಕಾದುದನ್ನು ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಒಂದು ಮಟ್ಟಿನ ಸೌಖ್ಯವು ಇರಲಿದೆ. ಇಷ್ಟಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಕ್ಷೇಮಸಮಾಚಾರವನ್ನು ಹಂಚಿಕೊಳ್ಳುವರು.
ಮಿಥುನ ರಾಶಿ : ಭೂಮಿಯ ವ್ಯವಹಾರವನ್ನು ಯಾವುದೋ ತೊಂದರೆಯಿಲ್ಲದೇ ಮಾಡಲಾಗದು ಎಂಬ ಮನೋಭಾವ ಬದಲಾಗುವುದು. ನಿಮಗೆ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಹೆಚ್ಚಾಗುವುದು.
ಕರ್ಕಾಟಕ ರಾಶಿ : ಒಳ್ಳೆಯ ಸಂಬಂಧಗಳು ನಿಮಗೆ ಪಥ್ಯವಾಗದೇ ಇರಬಹುದು. ನಿಮ್ಮ ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದನ್ನು ಸಾಧಿಸುವಿರಿ. ಆದರೆ ಅದಕ್ಕೆ ಬೇಕಾದ ಸರಳ ಮಾರ್ಗವನ್ನು ಮರೆಯುವಿರಿ. ಇಂದು ನೀವು ಮಾಡುವ ಕೆಲಸಗಳು ಲಾಭದಾಯಕ ಆಗಿದ್ದರೂ ಪರಿಶ್ರಮವೂ ಹೆಚ್ಚಿರಲಿದೆ.
ಸಿಂಹ ರಾಶಿ : ಒಳ್ಳೆಯ ವಿಚಾರಗಳನ್ನು ಪ್ರಚಾರ ಮಾಡುವ ಬಗ್ಗೆ ಚಿಂತಿಸಿ. ಇಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಕೊಂಚ ಬದಲಾವಣೆಯನ್ನು ಮಾಡಲಿದ್ದೀರಿ. ನಿಮ್ಮ ಅಹಂಕಾರವೇ ನಿಮ್ಮನ್ನು ಜನರಿಂದ ದೂರವಿರುವಂತೆ ಮಾಡಬಹುದು.
ಕನ್ಯಾ ರಾಶಿ : ಒಬ್ಬರನ್ನೇ ನಂಬಿ ಕುಳಿತರೆ ನಿಮಗೆ ಆಗಬೇಕಾದುದು ಸಕಾಲಕ್ಕೆ ಆಗದು. ನೀವು ಅಧಿಕಾರವನ್ನು ಪಡೆಯಲು ಮಾರ್ಗವನ್ನು ಬದಲಿಸುವಿರಿ. ಖರ್ಚನ್ನು ನೀವು ನಿಯಂತ್ರಣ ಮಾಡುವ ಅವಶ್ಯಕತೆ ಇಂದು ಬರಬಹುದು.
ತುಲಾ ರಾಶಿ : ನಿಮ್ಮ ತಪ್ಪಿಗೆ ಯಾವುದೋ ಒಂದು ರೀತಿಯಲ್ಲಿ ಪ್ರಾಯಶ್ಚಿತ್ತವಾಗಲಿದೆ. ನಿಮ್ಮ ಪೂರ್ವಯೋಜಿತ ವಿಷಯಗಳಿಂದ ಸಫಲತೆಯನ್ನು ಕಾಣಲಿದ್ದೀರಿ. ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ.
ವೃಶ್ಚಿಕ ರಾಶಿ : ವ್ಯವಸ್ಥೆಯನ್ನು ಸರಿ ಮಾಡುವ ಉದ್ದೇಶವೇ ನಿಮ್ಮಲ್ಲಿ ಇರುವುದು. ನಿಮಗೆ ಮಕ್ಕಳ ವಿಚಾರದಲ್ಲಿ ಸಂತೋಷವಿರಲಿದೆ. ಖಾಸಗಿ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗಬಹುದು.
ಧನು ರಾಶಿ : ಹಿರಿಯರಿಗೆ ನಿಮ್ಮ ಮೇಲೆ ಸದಭಿಪ್ರಾಯ ಮೂಡದೇ ಇರಬಹುದು. ನಿಮ್ಮ ಸಹೋದರರಿಂದ ನಿಮಗೆ ಆಕಸ್ಮಿಕವಾಗಿ ಸಹಾಯ ಸಿಗಬಹುದು. ಮಕ್ಕಳ ಮೇಲೆ ನಿಮಗೆ ಬೇಸರ ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿಯು ಎದುರಾಗಬಹುದು.
ಮಕರ ರಾಶಿ : ಇಂದು ನೀವು ಬೇರೆಯವರ ಕಷ್ಟಕ್ಕೆ ನೆರವಾಗುವಿರಿ. ನೀವು ಇಂದು ನಂಬಿಕೆಯನ್ನು ಸುಳ್ಳು ಮಾಡುವಿರಿ. ನಿಮ್ಮ ಪ್ರಾಬಲ್ಯವೇ ಮೇಲಾದೀತು. ದೈವದತ್ತವಾದ ಆರೋಗ್ಯವನ್ನು ನೀವೇ ಹಾಳುಮಾಡಿಕೊಳ್ಳುವಿರಿ.
ಕುಂಭ ರಾಶಿ : ಸಾಲಕೂಪವೂ ದಿನದಿಂದ ದಿನಕ್ಕೆ ಹೆಚ್ಚಾದಂತೆ ತೋರುತ್ತದೆ. ನೀವು ಧಾರ್ಮಿಕ ಕಾರ್ಯಗಳಲ್ಲಿ ತೊಡಗುವ ಆಸಕ್ತಿ ಇರುವುದು. ಅನಿರೀಕ್ಷಿತ ಧನಾಗಮನವು ನಿಮಗೆ ಸಂತಸವನ್ನು ತರಲಿದೆ.ವಿವಾಹದ ಮಾತುಕತೆ ವಿಳಂಬವಾಗಿ ನಿಮಗೆ ಬೇಸರ ತರಿಸಬಹುದು.
ಮೀನ ರಾಶಿ : ನಿಮ್ಮ ಹಣವು ಒಳ್ಳೆಯ ಕಾರ್ಯಕ್ಕೆ ಉಪಯೋಗವಾದರೆ ಖುಷಿಪಡಿ. ಸಂಕಟಪಟ್ಟುಕೊಂಡು ಬರುವ ಪುಣ್ಯವನ್ನೂ ಕಳೆದುಕೊಳ್ಳಬೇಡಿ. ಇಂದು ನಿಮ್ಮ ಸ್ವಂತ ಕಾರ್ಯದಲ್ಲಿ ಹೆಚ್ಚಿನ ಪ್ರಗತಿ ಇರುವುದು. ನಿಮ್ಮ ಅಹಂಕಾರಕ್ಕೆ ಕಡಿವಾಣ ಹಾಕಿಕೊಳ್ಳಿ. ಸುಖದುಃಖಗಳು ಎರಡೂ ನಿಮಗೆ ಸಮವಾಗಿ ಸಿಗಬಹುದು.