Tue. Apr 8th, 2025

Crime News: ಮಹಿಳೆಯ ಮೇಲೆ ಅತ್ಯಾಚಾರ – ಅತ್ಯಾಚಾರ ಮಾಡಿ ಆಕೆಯಿಂದ ಆ ಕಾಮುಕರು ಮಾಡಿಸಿದ್ದೇನು ಗೊತ್ತಾ??

ಇಂದೋರ್:(ಸೆ.4) ಮಧ್ಯಪ್ರದೇಶದ ಇಂದೋರ್‌ನಲ್ಲಿ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿ, ಬೆಲ್ಟ್‌ನಿಂದ ಹೊಡೆದು ಅರ್ಧ ಗಂಟೆಗಳ ಕಾಲ ಬೆತ್ತಲೆಯಾಗಿ ನೃತ್ಯ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 2 ತಿಂಗಳ ಹಿಂದೆ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳು ಜೂನ್ 11ರಂದು ತನ್ನನ್ನು ಬಲವಂತವಾಗಿ ಗೋಡೌನ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಕನಾಡಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಿವಿಯಲ್ಲಿ ಅಶ್ಲೀಲ ವೀಡಿಯೋ ನೋಡಿದ ನಂತರ ಆರೋಪಿಗಳು ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ದೂರನ್ನು ಪೊಲೀಸರು ಆರಂಭದಲ್ಲಿ ಗಂಭೀರವಾಗಿ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿ ಆ ಮಹಿಳೆ ಮಧ್ಯಪ್ರದೇಶ ಹೈಕೋರ್ಟ್‌ಗೆ ತೆರಳಿದ ನಂತರ ಸೋಮವಾರ ತಡರಾತ್ರಿ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜುಲೈ 17ರಂದು ತಾನು ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಆಕೆಯ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಮಹಿಳೆಯ ದೂರನ್ನು 90 ದಿನಗಳಲ್ಲಿ ವಿಲೇವಾರಿ ಮಾಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕನಾಡಿಯಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ಸೂಚಿಸಿತು. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಬಿಜೆಪಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆಡಳಿತ ಪಕ್ಷದ ಒತ್ತಡದಿಂದಾಗಿ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಆರೋಪಿಸಿದ್ದಾರೆ. ಆದರೆ, ಮಧ್ಯಪ್ರದೇಶ ರಾಜ್ಯ ಬಿಜೆಪಿ ವಕ್ತಾರ ನರೇಂದ್ರ ಸಲೂಜಾ ಅವರು ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ ಮತ್ತು ನ್ಯಾಯದ ಭರವಸೆ ನೀಡಿದ್ದಾರೆ.

ಜುಲೈ 17ರಂದು ತಾನು ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.ಆಕೆಯ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಮಹಿಳೆಯ ದೂರನ್ನು 90 ದಿನಗಳಲ್ಲಿ ವಿಲೇವಾರಿ ಮಾಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕನಾಡಿಯಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ಸೂಚಿಸಿತು.

ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದೇ ವೇಳೆ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಬಿಜೆಪಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಆಡಳಿತ ಪಕ್ಷದ ಒತ್ತಡದಿಂದಾಗಿ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಆರೋಪಿಸಿದ್ದಾರೆ. ಆದರೆ, ಮಧ್ಯಪ್ರದೇಶ ರಾಜ್ಯ ಬಿಜೆಪಿ ವಕ್ತಾರ ನರೇಂದ್ರ ಸಲೂಜಾ ಅವರು ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ ಮತ್ತು ನ್ಯಾಯದ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *