Thu. Dec 26th, 2024

Belthangadi: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿ ಮೃತ್ಯು

ಬೆಳ್ತಂಗಡಿ:(ಸೆ.5) ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 🔷ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ

ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು.

ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *