ಮಂಗಳೂರು:(ಸೆ.6) ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಯೆಯ್ಯಾಡಿ ಏರ್ಪೋಟ್ ರೋಡಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ಇದನ್ನೂ ಓದಿ: 🏐ಮುಂಡಾಜೆ : ತಾಲೂಕು ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ
ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಅನಾಹುತ ನಡೆದಿದೆ. ಕೋಡಿಕಲ್ ನಿವಾಸಿ ಕಾಶಿನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತರು.
ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.