Tue. Apr 8th, 2025

Sulya: ದ್ವಿಚಕ್ರ ವಾಹನ ಮತ್ತು ಆಟೋ ನಡುವೆ ಭೀಕರ ಅಪಘಾತ – ಐಟಿಐ ವಿದ್ಯಾರ್ಥಿ ಮೃತ್ಯು

ಸುಳ್ಯ:(ಸೆ.8) ವಾಹನ ಅಪಘಾತಕ್ಕೆ ಐಟಿಐ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ಸುಳ್ಯದಲ್ಲಿ ಸಂಭವಿಸಿದೆ.

ಇದನ್ನೂ ಓದಿ: 🟣ಬೆಳ್ತಂಗಡಿ: 14ನೇ ವರ್ಷದ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ


ಸುಳ್ಯ ತಾಲೂಕಿನ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ದ್ವಿಚಕ್ರ ವಾಹನ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದ್ದು,

ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್ (23) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ನವೀನ್ ಸುಳ್ಯದ ಖಾಸಗಿ ಕಾಲೇಜಿನ ಐಟಿಐ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ.

ಸದ್ಯ ಮೃತರ ಸ್ನೇಹಿತ ನೀಡಿದ ದೂರಿನಂತೆ ಆಟೋ ಚಾಲಕನ ವಿರುದ್ಧ ಸುಳ್ಯ ಠಾಣೆಯಲ್ಲಿ ಅ ಕ್ರ ನಂ 108/2024 ಕಲಂ 281,106 ಬಿಎನ್‌ಎಸ್ ರಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *