ಬೆಳ್ತಂಗಡಿ: (ಸೆ.9) ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ,

ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಬಗ್ಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಅವರು ಶೀಘ್ರದಲ್ಲಿ ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.





