Thu. Dec 26th, 2024

Accident: ಲಾರಿ-ಕಾರುಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

ಸಕಲೇಶಪುರ :(ಸೆ.10) ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಐವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ.

ಇದನ್ನೂ ಓದಿ: ⚖Daily Horoscope – ಅಶುಭವಾರ್ತೆಯು ಈ ರಾಶಿಯವರನ್ನು ಕುಗ್ಗಿಸಬಹುದು!!!


ಹಾಸನ ತಾಲೂಕಿನ ಕಟ್ನಾಯ ಸಮೀಪದ ನಾಯಕರಹಳ್ಳಿಯ ಚಂದ್ರೇಗೌಡ (50) ಮೃತರು.


ಕಾರಿನಲ್ಲಿದ್ದ ಶೈಲಾ ಹಾಗೂ ಕಿರಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.


ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಬರುತ್ತಿದ್ದ ಕಾರುಗಳು ಒಂದನ್ನೊಂದು ಹಿಂದಿಕ್ಕುತ್ತಿದ್ದಾಗ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಡಿಕ್ಕಿ ಹೊಡೆದಿವೆ.


ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *