Tue. Mar 25th, 2025

Mangalore: ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು:(ಸೆ.11) ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.


7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಆಯುಕ್ತರು ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು.

ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.


ಈ ಸಂದರ್ಭದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಸಂಚಾರ ವಿಭಾಗದ ಇನ್‌ಸ್ಪೆಕ್ಟರ್‌ಗಳಾದ ಶರೀಫ್, ಹುಲುಗಪ್ಪ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *