Mon. Feb 17th, 2025

Daily Horoscope – ಇಂದು ಈ ರಾಶಿಯವರ ಅನಿರೀಕ್ಷಿತ ನಡೆಯು ಶತ್ರುಗಳಿಗೆ ಭಯ ಹುಟ್ಟಿಸೀತು!!

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಆಯುಷ್ಮಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:35 ಗಂಟೆ, ರಾಹು ಕಾಲ ಮಧ್ಯಾನ್ನ 02:00 ರಿಂದ 03:32, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:26 ರಿಂದ 10:57ರ ವರೆಗೆ.

ಮೇಷ ರಾಶಿ :ನಿಮ್ಮ ವೇಗದ ಮಾತು ಇತರರಿಗೆ ಅರ್ಥವಾಗದೇ ಇರಬಹುದು. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸಮಯವನ್ನು ಹೊಂದಿಸುವುದು ಕಷ್ಟವಾದೀತು. ಪೂರಕ ವಾತಾವರಣ ಕೊರತೆ ಕಾಣುವುದು. ಹೂಡಿಕೆಯನ್ನು ಇನ್ನೊಬ್ಬರ ಒತ್ತಾಯಕ್ಕೆ ಮಾಡುವಿರಿ. ಪುಣ್ಯದ ಫಲವನ್ನು ನೀವು ಪಡೆಯುವಿರಿ. ಕೆಲವು ಕಾರ್ಯಗಳು ನಿಮಗೆ ನಿಷ್ಪ್ರಯೋಜಕ ಎಂದು ಕಾಣಿಸುವುದು. ಕೆಲಸವನ್ನು ಬಿಡಬೇಕಾದ ಸಂದರ್ಭವು ಬರಬಹುದು. ನಿಮ್ಮ ಆತ್ಮವಿಶ್ವಾಸಕ್ಕೆ ತೊಂದರೆ ಬರಬಹುದು.

ವೃಷಭ ರಾಶಿ : ನೀವು ಕೆಲಸ ಮಾಡುವ ಸಂಸ್ಥೆಯ ರಹಸ್ಯವನ್ನು ನೀವು ಬಿಟ್ಟುಕೊಡಲಾರಿರಿ. ಒತ್ತಡ ಮಾಡಿಕೊಂಡು ಕಾರ್ಯವನ್ನು ಮಾಡುವುದು ಬೇಡ. ನೀವು ಕೆಲಸವನ್ನು ಕಳೆದುಕೊಂಡಿರುವುದು ದಾಯಾದಿಗಳಿಗೆ ಸಂತೋಷದ ಸಮಾಚಾರವಾಗಲಿದೆ. ಸಣ್ಣ ಸಣ್ಣ ಖರ್ಚುಗಳೇ ಕಷ್ಟವಾದೀತು. ಭವಿಷ್ಯದಲ್ಲಿ ಬರಬಹುದಾದ ತೊಂದರೆಗಳನ್ನು ನೀವು ಊಹಿಸಿಕೊಂಡು ಚಿಂತೆಪಡುವಿರಿ.

ಮಿಥುನ ರಾಶಿ : ಮನಸ್ಸು ಯಾವುದೋ ಕಾರಣಕ್ಕೆ ಭಾರವಾಗಬಹುದು. ಅನ್ಯರಿಂದ ಅಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ನೀವು ಧೈರ್ಯವನ್ನು ಬಿಡಲಾರಿರಿ. ಕೋಪವು ನಿಮ್ಮ ಸಹಜತೆಯಾದರೂ ಅದರಿಂದ ಹೊರಬರುವ ತಂತ್ರವನ್ನು ತಿಳಿದುಕೊಳ್ಳಬೇಕು. ನಿಮ್ಮ ಯೋಜನೆಗಳು ವಾಸ್ತವಕ್ಕೆ ಹತ್ತಿರವಿರಲಿ. ಸಂಗಾತಿಯ ಒಳ್ಳೆಯ ಕೆಲಸಗಳು ನಿಮಗೆ ಇಷ್ಟವಾಗದು. ಕೆಲಸವನ್ನು ಏಕಾಗ್ರತೆಯಿಂದ ಮಾಡುವಿರಿ. 

ಕಟಕ ರಾಶಿ : ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುವ ಅವಶ್ಯಕತೆ ಇಲ್ಲ. ಉತ್ತಮ ಭೂಮಿಯ ಲಾಭವಾಗಲಿದೆ. ಅಪಾಯದಿಂದ ಹೊರಬರಲಿದ್ದೀರಿ. ಧನವ್ಯಯವನ್ನು ನಿಮ್ಮ ಜಾಣತನದಿಂದ ತಪ್ಪಿಸಿಕೊಳ್ಳುವಿರಿ‌. ಅಪರಿಚಿತರಿಗೆ ಇಂದು ಸಹಾಯವನ್ನು ಮಾಡುವಿರಿ. ಕೋಪದ ನಿಯಂತ್ರಣವನ್ನು ಮಾಡಲು ಕಷ್ಟವಾದೀತು. ಸಂಸಾರದಲ್ಲಿ ನಿರಾಸಕ್ತಿಯು ಇರಲಿದೆ. ನಿಮ್ಮ ಸಣ್ಣತನವೇ ದೊಡ್ಡ ಲಾಭಕ್ಕೆ ತೊಂದರೆಯಾಗುವುದು. 

ಸಿಂಹ ರಾಶಿ : ಬಂಧುಗಳ ಕಾರಣದಿಂದ ಇಂದಿನ ಕಾರ್ಯದಲ್ಲಿ ತೊಡಕುಗಳು ಕಾಣಿಸಿಕೊಳ್ಳುವುದು. ಕಾರ್ಯದ ಸ್ಥಳದಲ್ಲಿ ಪ್ರತಿಯೊಬ್ಬರೂ ನಿಮ್ಮ ಕೆಲಸವನ್ನು ಪ್ರಶಂಸಿಸುವರು. ಅಸಾಧ್ಯವನ್ನು ಸಾಧಿಸುವ ಛಲವಿರಲಿದೆ. ಉದ್ಯಮದಲ್ಲಿ ಹಿನ್ನಡೆಯಾಗುವ ಸಂಭವವು ನಿಮಗೆ ಮೊದಲೇ ಗೊತ್ತಾಗಲಿದೆ. ಎಷ್ಟೇ ಪ್ರಯತ್ನಿಸಿದರೂ ಹಳೆಯ ನೆನಪುಗಳಿಗೆ ಕಡಿವಾಣ ಹಾಕಲಾಗದು. ನಿರಪೇಕ್ಷ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳಬಹುದು. ಇಂದು ನೀವು ಹೊಸ ತಂಡವನ್ನು ಕಟ್ಟಿಕೊಳ್ಳುವಿರಿ.

ಕನ್ಯಾ ರಾಶಿ : ಸಾಲವನ್ನು ಇನ್ನೊಬ್ಬರಿಗಾಗಿ ಮಾಡಬೇಕಾದೀತು. ನಿಮ್ಮ ಸಂಕಷ್ಟಕ್ಕೆ ಯಾರನ್ನೋ ದೂರುತ್ತ ಇರುವುದು ಸರಿಯಲ್ಲ. ಹಣದ ಹರಿವು ಇಂದು ಸ್ವಲ್ಪ ಕಡಿಮೆಯಾಗಲಿದೆ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ನಿಮ್ಮ ಕಳವಳವು ಮಿತ್ರರಿಗೆ ಗೊತ್ತಾಗುವುದು. ಕಲಾವಿದರು ದೂರಪ್ರಯಾಣವನ್ನು ಮಾಡುವಿರಿ. ನಿದ್ರೆಯು ಕಡಿಮೆಯಾಗಿ ಕೆಲಸದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಪ್ರೇಮಿಯ ಜೊತೆ ಈ ದಿನವನ್ನು ಕಳೆಯುವಿರಿ. ಸ್ತ್ರೀಸಂಬಂಧದ ವಿಷಯದಲ್ಲಿ ನಿಮ್ಮನ್ನು ವಿಚಾರಿಸಬಹುದು. 

 

ತುಲಾ ರಾಶಿ : ಇಂದು ನೀವು ಹೊರಟ ಕಾರ್ಯದಿಂದ ಅರ್ಧಕ್ಕೆ ಬರಬೇಕಾದೀತು. ಇಂದು ಮೇಲಧಿಕಾರಿಗಳಿಂದ ಹಲವು ರೀತಿಯ ಒತ್ತಡವನ್ನು ನೀವು ಅನುಭವಿಸುವಿರಿ. ಸ್ಥಿರಾಸ್ತಿಯಿಂದ ನಿಮಗೆ ಸಾಲವು ದೊರೆಯಬಹುದು. ಹೊಸ ಸಂಬಂಧವನ್ನು ಮಾಡಿಕೊಳ್ಳುವಿರಿ. ನಿರಂತರ ಕೆಲಸವು ನಿಮಗೆ ಇಂದು ಇಷ್ಟವಾಗಲಿದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಮಾತುಗಳಲ್ಲಿ ಇರುವ ಕೋಪವು ನಿಮಗೆ ಕಾಣಿಸುವುದು. ವಾಹನದ ದುರಸ್ತಿಯಿಂದ ಖರ್ಚಾಗಲಿದೆ.

ವೃಶ್ಚಿಕ ರಾಶಿ : ಹಣಕ್ಕಿಂತ ಆರೋಗ್ಯ ಮುಖ್ಯವಾದ ಕಾರಣ ಅಂತಹ ಸನ್ನಿವೇಶವನ್ನು ನೀವು ಅರ್ಥಮಾಡಿಕೊಳ್ಳಬೇಕು. ನಿಮ್ಮ ಕಠಿಣ ಪರಿಶ್ರಮವು ಕೆಲಸಕ್ಕೆ ಬಾರದು.‌ ಯುಕ್ತಿಯಿಂದ ನಿರ್ವಹಿಸುವ ಚಾಣಾಕ್ಷತೆ ಬೇಕು. ಸರ್ಕಾರದಿಂದ ಸೌಲಭ್ಯವನ್ನು ನೀವು ನಿರೀಕ್ಷಿಸುತ್ತಿರುವಿರಿ. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಕೊಡುವಿರಿ. ಸಾಮಾಜಿಕ ತಾಣದಲ್ಲಿ ನಿಮಗೆ ಸ್ತ್ರೀಯ ಜೊತೆ‌ ಪ್ರೇಮವು ಉಂಟಾಗಬಹುದು. ಹೊಸ ಬಾಳಿನ ಕಡೆ ಮನಸ್ಸು ಹರಿಯುವುದು. 

ಧನು ರಾಶಿ : ನಿಮ್ಮನ್ನು ಅಗೌರವದಿಂದ ಕಾಣುವವರ ಮೇಲೆ‌ ಕೋಪ ಬರುವುದು. ಆತ್ಮೀಯರ ಜೊತೆ ನಿಮ್ಮ ಸಂಬಂಧವು ಚೆನ್ನಾಗಿರಲಿದೆ. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವಿರಿ. ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದು ಉತ್ತಮ. ನಿಮ್ಮ ಕುರಿತು ತಂದೆ ತಾಯಿಯರು ಚಿಂತಿಸುವರು. ಭೂಮಿಯನ್ನು ವಶ ಮಾಡಿಕೊಳ್ಳಲು ಪ್ರಭಾವಿಗಳ ಸಂಗವನ್ನು ಮಾಡಬೇಕಾದೀತು. ಭೂಮಿಯ ಪ್ರಕರಣವು ನಿಮ್ಮನ್ನು ಚಿಂತೆಗೀಡುಮಾಡೀತು. 

ಮಕರ ರಾಶಿ : ಒಳ್ಳೆಯ ವ್ಯವಸ್ಥೆಯನ್ನು ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು. ನಿಮ್ಮ ಪ್ರಮುಖ ದಾಖಲೆಗಳನ್ನು ಯಾರಿಗೂ ಹಸ್ತಾಂತರಿಸುವುದು ಬೇಡ. ಸಮಾಜಮುಖೀ ಕೆಲಸದಿಂದ ನಿಮಗೆ ಗೌರವವು ಸಿಗಲಿದೆ. ಮಕ್ಕಳ ಯಶಸ್ಸಿನಿಂದ ಪೋಷಕರಿಗೆ ಸಂತಸವಾಗಲಿದೆ. ವಾಹನ ಚಲಿಸುವಾಗ ಜಾಗರೂಕತೆ ಮುಖ್ಯವಾಗಲಿದೆ. ಶತ್ರುಗಳು ವ್ಯವಹಾರದಲ್ಲಿ ಮಧ್ಯವರ್ತಿಗಳಾಗಿ ಇರುವರು. ಮೋಸದ ಜಾಲಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ.

ಕುಂಭ ರಾಶಿ : ಒಂದಾದ ಮೇಲೆ‌ ಒಂದರಂತೆ ಒತ್ತಡ ಕಾಣಿಸಿಕೊಳ್ಳುವುದು. ಇಂದು ಯಾವುದನ್ನೂ ಅತಿಯಾಗಿ ಹಚ್ಚಿಕೊಳ್ಳದೇ ಕಾರ್ಯತತ್ಪರರಾಗುವಿರಿ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ವಿವಾಹದ ಮಾತುಕತೆಗಳು ಬಿರುಸಿನಿಂದ ನಡೆಯಲಿದೆ. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಪತ್ನಿಯ ಬಗ್ಗೆ ನಿಮಗೆ ಗೌರವವು ಕಡಿಮೆ ಆಗಬಹುದು. ಇನ್ನೊಬ್ಬರ ನೋವಿಗೆ ಸ್ಪಂದಿಸಲು ಹೋಗಿ ಸಿಕ್ಕಿಬೀಳಬೇಕಾದೀತು. 

ಮೀನ ರಾಶಿ : ನಿಮ್ಮ‌ಸಾಮಾಜಿಕ‌ ಕಾರ್ಯಗಳಿಗೆ ಉತ್ತಮ‌ ಜನಸ್ಪಂದನೆ ಸಿಗಬಹುದು. ನೀವು ಉದ್ಯಮಿಗಳ ಜೊತೆ ಹೊಸ ಯೋಜನೆಯನ್ನು ಪಡೆಯುವ ತವಕದಲ್ಲಿ ಇರುವಿರಿ. ಸರ್ಕಾರದ ಕೆಲಸವಾಗದೇ ಅಧಿಕ ಓಡಾಟವಾದೀತು. ಆರ್ಥಿಕ ನೆರವನ್ನು ನೀವು ಬಯಸುವಿರಿ. ಸಮಾಧಾನ ಚಿತ್ತದಿಂದ ನಿಮ್ಮ ಸಮಸ್ಯೆಗಳನ್ನು ಸರಿ ಮಾಡಿಕೊಳ್ಳುವಿರಿ. ವೈವಾಹಿಕ ಜೀವನವು ಹಿರಿಯರ ಮಾರ್ಗದರ್ಶನದಲ್ಲಿ ಆಗುವುದು. ಮಕ್ಕಳಿಗೆ ಸಂಪತ್ತನ್ನು ಹಂಚುವ ಯೋಚನೆ ಇರಲಿದೆ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು