Wed. Nov 20th, 2024

Mandya: ನಾಗಮಂಗಲ ಗಲಭೆ ಪ್ರಕರಣ – 52 ಮಂದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಮಂಡ್ಯ :(ಸೆ.13) ಗಣೇಶ ವಿಸರ್ಜನೆ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 52 ಮಂದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಆಗಿದೆ.

ಇದನ್ನೂ ಓದಿ: 🟠ಉಜಿರೆ : ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ


ಇಂದು ಈ ಕೇಸ್ ಕುರಿತು ವಿಚಾರಣೆ ನಡೆಸಿದ ಜೆ.ಎಂ.ಎಫ್.ಸಿ. ಕೋರ್ಟ್‌ನ ಹಿರಿಯ ನ್ಯಾಯಧೀಶರಾದ ಯೋಗೇಶ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇಂದಿನಿಂದ 25ನೇ ತಾರೀಕಿನವರೆಗೂ 52 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏನಿದು ಕೇಸ್?
ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ಸಾಗಿತ್ತು. ದರ್ಗಾ ಎದುರು ಮೆರವಣಿಗೆ ಸಾಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಇದ್ದಕ್ಕಿದ್ದಂತೆ ಕಲ್ಲು ತೂರಿದ್ದೇ ಗಲಾಟೆಗೆ ಕಾರಣ ಆಗಿದೆ.

54 ಮಂದಿ ಅರೆಸ್ಟ್
ಗಲಭೆ ಪ್ರಕರಣಕ್ಕೆ ಸಂಬಂಧ ಒಟ್ಟು 6 ಎಫ್‌ಐಎರ್ ದಾಖಲಿಸಲಾಗಿದೆ. ಅಂತೆಯೇ ಈವರೆಗೂ 54 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *