Wed. Nov 20th, 2024

Subramanya: ಸುಬ್ರಮಣ್ಯ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್‌ ಭೇಟಿ

ಸುಬ್ರಮಣ್ಯ:(ಸೆ.13) ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಕುಕ್ಕೆ ಸುಬ್ರಮಣ್ಯ ಠಾಣೆಗೆ ಮೊದಲ ಬಾರಿಗೆ ಭೇಟಿ ನೀಡಿದರು. ಪೋಲಿಸ್ ಠಾಣೆಯ ಕುಂದು ಕೊರತೆಗಳ ಬಗ್ಗೆ ಪೊಲೀಸ್ ಸಿಬ್ಬಂದಿಗಳ ಜೊತೆ ಚರ್ಚೆ ನಡೆಸಿದರು.

ಇದನ್ನೂ ಓದಿ: 🔴ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಕು। ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

ಪಶ್ಚಿಮ ವಲಯಕ್ಕೆ ಸಂಬಂಧ ಪಟ್ಟ 4ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಯಾವುದೇ ಕೋಮುಗಲಭೆಗಳು ಅಥವಾ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಕ್ಷಣ ನಮ್ಮ ಪೊಲೀಸ್ ಅಧಿಕಾರಿಗಳು,

ಸಿಬ್ಬಂದಿಗಳು ಸ್ಪಂದಿಸುತ್ತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕರ್ತವ್ಯ ನಿಷ್ಠೆಯನ್ನು ಮೆರೆದಿರುತ್ತಾರೆ ಮತ್ತು ಯಾವುದೇ ಘಟನೆಗಳು ಸಂಭವಿಸಿದಲ್ಲಿ ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ

ಹಾಗೂ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅತೀ ವೇಗವಾಗಿ ಸುದ್ದಿಗಳು ತಿಳಿಯುತ್ತವೆ. ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜ ಸೇವೆಯುಳ್ಳವರಾಗಿರುತ್ತಾರೆಂದರು.

ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ, ಕುಕ್ಕೆ ಸುಬ್ರಮಣ್ಯ ದೇಶ ವಿದೇಶದಲ್ಲಿ ಪ್ರಸಿದ್ಧವಾದ ಕ್ಷೇತ್ರವಾಗಿದ್ದು ಸುರಕ್ಷತೆಯ ದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲ್ಲಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಇಲಾಖಾ ಹಂತದಲ್ಲಿ ಪ್ರಸ್ತಾವಿಸಿ , ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಸುಬ್ರಮಣ್ಯ ಠಾಣೆಯ ಹೊಸ ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಕಟ್ಟಡ ಉದ್ಘಾಟಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಎನ್. ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಕುಮಾರ್, ಪುತ್ತೂರು ಉಪವಿಭಾಗ ಡಿವೈಎಸ್‌ ಪಿ ಪೋಲಿಸ್ ಅರುಣ್ ನಾಗೇಗೌಡ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *