ಬಂಟ್ವಾಳ :(ಸೆ.14) ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ ಘಟನೆ ನಡೆದಿದೆ.

ಇದನ್ನೂ ಓದಿ: ⛔ಉಳ್ಳಾಲ : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಮನೆಯಿಂದ ಕಳವು ನಡೆದಿದೆ.

ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ.8ರಂದು ಮನೆಗೆ ಬೀಗ ಹಾಕಿ ಪತ್ನಿ ಜೊತೆ ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸೆ.12ರಂದು ಮನೆಗೆ ಹಿಂದಿರುಗಿ ಬಂದಾಗ ಮುಂದಿನ ಬಾಗಿಲಿನ ಚಿಲಕ ಮುರಿದಿದ್ದು, ಬಾಗಿಲು ತೆರೆದುಕೊಂಡಿತ್ತು.
ಒಳಗೆ ಹೋಗಿ ನೋಡಿದಾಗ ಕೋಣೆಯೊಂದರ ಕಪಾಟಿನ ಬೀಗ ಒಡೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಅದರೊಳಗಿದ್ದ 1.70 ಲಕ್ಷ ರೂ. ನಗದು, 1.80 ಲಕ್ಷ ರೂ. ಮೌಲ್ಯದ 36 ಗ್ರಾಂ ತೂಕದ ಪೆಂಡೆಂಟ್ ಸಹಿತ ಚಿನ್ನದ ಸರ, ಕಪಾಟಿನ ಮೇಲಿದ್ದ 4 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.



ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್, ಪಿಎಸ್‌ಐಗಳಾದ ಹರೀಶ್ ಎಂ.ಆರ್., ಮೂರ್ತಿ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ತನಿಖೆ ನಡೆಸಿದೆ ಎಂದು ತಿಳಿದು ಬಂದಿದೆ.


