Wed. Nov 20th, 2024

Chikkaballapur: ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು

ಚಿಕ್ಕಬಳ್ಳಾಪುರ:(ಸೆ.15) ಮರಕ್ಕೆ ನೇಣು ಬಿಗಿದು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಘಟನೆ ಚಿಕ್ಕಬಳ್ಳಾಪುರದ ಬೀರಪ್ಪನಹಳ್ಳಿ ಗ್ರಾಮದ ಅರಣ್ಯದಲ್ಲಿ ನಡೆದಿದೆ.

ಇದನ್ನೂ ಓದಿ: 🛑ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ‌ ಘೋಷಿಸಿದ್ದೇಕೆ ಗೊತ್ತಾ?


ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಶಾಲೆ ಬ್ಯಾಗ್ ಪತ್ತೆಯಾಗಿದೆ.

ಬಾಲಕಿ ಚಿಕ್ಕಬಳ್ಳಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಪೋಷಕರಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ.


ಬಾಲಕ ಚಿಂತಾಮಣಿ ತಾಲ್ಲೂಕಿನ ಇರಗಂಪಲ್ಲಿ ಗ್ರಾಮದವನು ಎನ್ನಲಾಗಿದೆ. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮರದಿಂದ ಮೃತದೇಹಗಳನ್ನು ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *