Fri. Apr 4th, 2025

Kaatipalla : ಮಸೀದಿಗೆ ಕಲ್ಲು ಎಸೆದು ಗಾಜು ಪುಡಿಗೈದವರ ಹೆಡೆಮುರಿ ಕಟ್ಟಿದ ಪೊಲೀಸರು

The police tied the heads of the victims

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಾಟಿಪಳ್ಳದಲ್ಲಿ ಬಾನುವಾರ ರಾತ್ರಿ ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ತೂರಾಟ ನಡೆದಿದ್ದು ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ .ಈದ್ ಮಿಲಾದ್ ಮುನ್ನಾ ಈ ಘಟನೆ ನಡೆದಿದ್ದು ಸದ್ಯ ಮಸೀದಿಗೆ ಬಿಗಿಭದ್ರತೆ ಕಲ್ಪಿಸಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.surathka

ಬಂಧಿತರನ್ನು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂದು ತಿಳಿದು ಬಂದಿದೆ.

ಕಳೆದ ರಾತ್ರಿ ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದ ಕಿಡಿಗೇಡಿಗಳು ಮಸೀದಿಯ ಹಿಂಭಾಗದ ಕಿಟಕಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು. ಬಳಿಕ ಒಂದು ಬೈಕ್ ನಲ್ಲಿದ್ದ ಮೂವರು ಗಣೇಶ ಕಟ್ಟೆಯ ಕಡೆ ತೆರಳಿದ್ದರೆ, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರು ಬೈಕ್ ತಿರುಗಿಸಿಕೊಂಡು ವಾಪಸ್ ಸ್ಮಶಾನದ ಕಡೆಗೆ ಪರಾರಿಯಾಗಿದ್ದರು.ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ

Leave a Reply

Your email address will not be published. Required fields are marked *