Wed. Nov 20th, 2024
Daily Horoscope - ಇಂದು ಈ ರಾಶಿಯವರಿಗೆ ಆತುರವೇ ಅಪಾಯ ತಂದೊಡ್ಡಬಹುದು

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಧೃತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:31 ಗಂಟೆ, ರಾಹು ಕಾಲ ಮಧ್ಯಾಹ್ನ 03:29 ರಿಂದ 05:00, ಯಮಘಂಡ ಕಾಲ ಬೆಳಿಗ್ಗೆ 09:25 ರಿಂದ 10:56ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:27 ರಿಂದ ಮಧ್ಯಾಹ್ನ 01:58ರ ವರೆಗೆ.

ಮೇಷ ರಾಶಿ: ಅತಿಯಾದ ವಿಶ್ವಾಸವೇ ನಿಮಗೆ ತೊಂದರೆ ಕೊಡಬಹುದು. ನಿಮ್ಮ ಸಹೋದ್ಯೋಗಿಗಳು ನಿಮಗೆ ಅನಿವಾರ್ಯವಾಗಿ ಬಂದ ಸಂಕಟಕ್ಕೆ ಧನಸಹಾಯ ಮಾಡುವರು. ಕಾನೂನಿಗೆ ವಿರುದ್ಧವಾಗಿ ಯಾವುದಾದರೂ ಕಾರ್ಯವನ್ನು ಮಾಡುವ ಆಲೋಚನೆ ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ.

ವೃಷಭ ರಾಶಿ: ಇಂದು ಇನ್ನೊಬ್ಬರ ಇಂಗಿತವನ್ನು ಅರ್ಥಮಾಡಿಕೊಂಡು ಕಾರ್ಯವನ್ನು ನಿರ್ವಹಿಸಿ. ಸಂಗಾತಿಯ ಜೊತೆಗಿನ ವೈಮನಸ್ಯವನ್ನು ಹೇಗಾದರೂ ಮಾಡಿ ದೂರ ಮಾಡಿಕೊಳ್ಳಬೇಕು. ಇಂದು ನೀವು ವಹಿಸಿಕೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮಾಡಲು ಸಾಧ್ಯವಾಗುವುದು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರಗೊಳಿಸಿಕೊಳ್ಳುವಿರಿ. ನಿಮಗೆ ಬೇಕಾದಾಗ ಬೇಕಾದವರು ಸಿಗದೇಹೋಗಬಹುದು. ಸಂಗಾತಿಯ ಮಾರ್ಗದರ್ಶನದಲ್ಲಿ ನೀವು ಕೆಲವು ಬದಲಾವಣೆಯನ್ನು ಮಾಡಿಕೊಳ್ಳುವಿರಿ.

ಮಿಥುನ ರಾಶಿ: ನೀವಾಗಿಯೇ ಸೃಷ್ಟಿಸಿಕೊಂಡಿದ್ದನ್ನು ಬಿಡುವುದು ಒಳ್ಳೆಯದು. ನಿಮ್ಮ ಜೀವನದಲ್ಲಿ ತಪ್ಪು ತಿಳುವಳಿಕೆಗಳೇ ಹೆಚ್ಚು ತೋರುವುದು. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ನಿಮ್ಮವರನ್ನು ನೀವು ಬಿಟ್ಟುಕೊಡಲಾರಿರಿ. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ.

ಕರ್ಕಾಟಕ ರಾಶಿ: ಅಪ್ರಬುದ್ಧ ಆಲೋಚನೆಗಳಿಂದ ನಿಮ್ಮ ವ್ಯಕ್ತಿತ್ವ ಗೊತ್ತಾಗುವುದು. ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿ ಹೋಗುವುದು. ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯು ಬರಲಿದೆ. ಹೊಸ ವೃತ್ತಿಯನ್ನು ಹುಡುಕುತ್ತಿದ್ದರೆ ಉತ್ತಮ ವೃತ್ತಿಯು ಸಿಗಬಹುದು.

ಸಿಂಹ ರಾಶಿ: ಇಂದು ಯಾರ ಪ್ರಶಂಸೆಯನ್ನೂ ಪೂರ್ಣವಾಗಿ ಒಪ್ಪಿಕೊಳ್ಳಲಾರಿರಿ. ಇಂದು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳ ಶ್ರಮ ಸಫಲವಾಗದು. ನೀವು ಇಂದು ಕಾರ್ಯದಲ್ಲಿ ಅನಿರೀಕ್ಷಿತ ಜಯವನ್ನು ಗಳಿಸುವಿರಿ. ಭೂಮಿಯ ದಾಖಲೆಗಳನ್ನು ಸರಿಯಾಗಿ‌ ಪಡೆದುಕೊಂಡು ವ್ಯವಹಾರವನ್ನು ಮುಂದುವಿರಿಸಿ. ಸುಳ್ಳಿನ ಮಾತಿನಿಂದ ನಿಮಗೆ ಅತಿಯಾದ ಕೋಪಬರುವುದು. ನಿಮ್ಮ ನಡವಳಿಕೆಯು ಕೆಲವರಿಗೆ ಇಷ್ಟವಾಗದೇ ಇರುವುದು.

ಕನ್ಯಾ ರಾಶಿ: ಯಾರ ವಿಶ್ವಾಸವನ್ನೂ ವಿಶೇಷವಾಗಿ ಗಳಿಸಲು ಇಷ್ಟವಾಗದು. ಇಂದು ಅಪರಿಚಿತರು ಮಾರಾಟದ ವಿಚಾರದಲ್ಲಿ ಮೋಸ ಮಾಡುವರು. ಬಂಧುಗಳು ನಿಮ್ಮ ಸಹಾಯವನ್ನು ಬಯಸುವರು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡಲಿದ್ದೀರಿ. ಕಲಾವಿದರು ತಮ್ಮ‌‌ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ. ನಿಮ್ಮ ಮಾತುಗಳು ತಪ್ಪಾಗಿ ಪ್ರಸಾರವಾಗಬಹುದು.

ತುಲಾ ರಾಶಿ: ಸರ್ಕಾರಿ ಉದ್ಯೋಗಿಗಳು ಸವಲತ್ತುಗಳನ್ನು ಕೇಳಿ ಪಡೆಯುವರು. ಸಾಂಸಾರಿಕ ಬದುಕಿನಲ್ಲಿ ಇಂದು ಸಣ್ಣಪುಟ್ಟ ಕಲಹಗಳಿದ್ದರೂ ತೂಗಿಸಿಕೊಂಡು ಹೋಗುವ ಸಾಮರ್ಥ್ಯ ಇರುವುದು. ದಾಯಾದಿ ಕಲಹವು ತಾರಕಕ್ಕೆ ಹೋಗಲಿದೆ. ನಿಮಗೆ ಬೆಂಬಲವು ಕಡಿಮೆ ಆಗಲಿದೆ. ಕಛೇರಿಯಲ್ಲಿ ನಿಮ್ಮ ಕೆಲಸವು ಮಂದಗತಿಯಲ್ಲಿ ಸಾಗಲಿದ್ದು ಸಹೋದ್ಯೋಗಿಗಳಿಂದ ದೂರು ಸಿಗಬಹುದು.

ವೃಶ್ಚಿಕ ರಾಶಿ: ಆದಾಯ ಮತ್ತು ಖರ್ಚನ್ನು ಸಮವಾಗಿ ತೂಗಿಸಿಕೊಂಡರೆ ಸ್ವಲ್ಪಮಟ್ಟಿನ ಚಿಂತೆ ದೂರಾಗುವುದು. ಎಂತಹ ಆಪ್ತರಾದರೂ ಸಹಕಾರವನ್ನು ಕೇಳುವಾಗ ಹಿಂದೇಟು ಹಾಕುವಿರಿ. ನಿಮ್ಮ ಆಸೆಯನ್ನು ಪ್ರಕಟಪಡಿಸಲು ಹಿಂಜರಿಯಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ವರ್ತಿಸುವಿರಿ. ವಿದ್ಯೆಯನ್ನು ಇನ್ನಷ್ಟು ಪಡೆಯುವ ಆಸೆ ಇರುವುದು. ದ್ವೇಷವು ನಿಮ್ಮ‌ ಜೀವನವನ್ನು ಮಾರ್ಗಭ್ರಷ್ಟ ಮಾಡಬಹುದು.

ಧನು ರಾಶಿ: ಅನಿರ್ದಿಷ್ಟ ಅವಧಿಯವರೆಗೆ ಉದ್ಯೋಗದ ಕಾರಣಕ್ಕೆ ಓಡಾಟ ಮಾಡುವಿರಿ. ಇಂದು ನಿಮಗೆ ಹಳೆಯ ಘಟನೆಗಳಿಂದ ಪಾಪಪ್ರಜ್ಞೆ ಕಾಡಬಹುದು. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯುವುದು ಉತ್ತಮ. ಶತ್ರುಗಳಿಂದ‌ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನದಿಂದ ಸ್ವಲ್ಪ ಫಲವನ್ನು ಪಡೆಯುವಿರಿ. ಅವಕಾಶದ ಕೊರತೆಯಿಂದ‌ ದುಃಖಿಸುವಿರಿ. ನಿಮ್ಮ ಧೈರ್ಯವು ಕ್ಷಣಿಕದ್ದು ಮಾತ್ರ. ನಿಮ್ಮ ಕಲ್ಪನೆಯಂತೆ ಎಲ್ಲವೂ ಆಗದು.

ಮಕರ ರಾಶಿ: ಮನೆ ಹಾಗೂ ಉದ್ಯೋಗದ ನಡುವೆ ಸರಿಯಾದ ಹೊಂದಾಣಿಕೆ ಕಷ್ಟ. ಇಂದು ನಿಮ್ಮ ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಅಂತಿಮ‌ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ನಿಮ್ಮ ಕಾರ್ಯವನ್ನು ಪರಿಶೀಲಿಸಲು ಉನ್ನತ ಅಧಿಕಾರಿಗಳು ಬರಲಿದ್ದಾರೆ. ಪ್ರಶಂಸೆಯೂ ಸಿಗುವ ಸಾಧ್ಯತೆ ಇದೆ‌‌. ತಾಯಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎನ್ನುವ ಸದ್ಭಾವ ಬರುವುದು.

ಕುಂಭ ರಾಶಿ: ಚರಾಸ್ತಿಯನ್ನು ನೀವು ಬಿಡಬೇಕಾಗುತ್ತದೆ. ಇಂದು ನಿಮ್ಮ ಮನಸ್ಸು ಅನೇಕರ ಸಲಹೆಗಳ ಕಾರಣದಿಂದ ಬಹಳ ಚಂಚಲವಾಗಿರಲಿದೆ. ನಿಮ್ಮ ಉದ್ಯೋಗದ ಕನಸು ನನಸಾಗಲಿದೆ. ಅಶಿಸ್ತಿನ ವ್ಯವಸ್ಥೆಯು ನಿಮಗೆ ಬೇಸರ ತರಿಸಬಹುದು. ವಿದೇಶದ ಕನಸು ಅಂಕುರಿಸಬಹುದು. ಸಹೋದರಿಯರಿಗೆ ಏನನ್ನಾದರೂ ನೀಡುವಿರಿ.

ಮೀನ ರಾಶಿ: ರಾಜಕೀಯ ಬಲದಿಂದ ಇಂದು ಕಾರ್ಯಗಳು ಸಿದ್ಧಿಸುವುದು. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಹಕಾರ ಸಿಗಲಿದೆ. ನಿಮ್ಮ ಪ್ರಯತ್ನಕ್ಕೆ ಅದೃಷ್ಟವೂ ಜೊತೆಯಾಗುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ನಿಮ್ಮ ಶತ್ರುಗಳಿಂದ ಕೆಲವು ಅವಕಾಶಗಳು ತಪ್ಪುವುದು. ವಿವಾಹಕ್ಕೆ ಬೇಕಾದ ತಯಾರಿಯನ್ನು ನೀವು ಮಾಡಿಕೊಳ್ಳುವಿರಿ. ವಿರೋಧಿಗಳು ನಿಮ್ಮ ಬಗ್ಗೆ ಮಾತನಾಡಿಕೊಳ್ಳಬಹುದು. ಮಕ್ಕಳ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಒಲವು ಹೆಚ್ಚಾಗಲಿದೆ.

Leave a Reply

Your email address will not be published. Required fields are marked *