ಉಜಿರೆ:(ಸೆ.17) ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಂಗಳೂರಿನಿಂದ ಚಾಮರಾಜ ನಗರದವರೆಗೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ
ಇದನ್ನೂ ಓದಿ: ⚖Aries to Pisces – ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ವಿಶೇಷ ಸ್ಥಾನ ಸಿಗಲಿದೆ!
ಪುತ್ತೂರಿನ ಮಾಣಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ
,ರೋವರ್ಸ್ ಹಾಗೂ ರೇಂಜರ್ಸ್ ಮತ್ತು ಜೂನಿಯರ್ ರೆಡ್ ಕ್ರಾಸ್ ಇವುಗಳ ಸ್ವಯಂ ಸೇವಕರು ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ ಸಾರುವ ಘೋಷಣೆಗಳನ್ನು ಹೇಳಿದರು. ಸಂವಿಧಾನದ ಪೀಠಿಕಾ ಭಾಗವನ್ನು ಉದ್ಘೋಷಿಸಿದರು.
ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ , ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ,
ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿ ಅಂಕಿತಾ , ಜೂನಿಯರ್ ರೆಡ್ ಕ್ರಾಸ್ ಅಧಿಕಾರಿಗಳಾದ ಅರ್ಚನಾ ಹಾಗೂ ಕವನಶ್ರೀ ಉಪಸ್ಥಿತರಿದ್ದರು.