Viral Video :(ಸೆ.18) ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕೆನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಆಗಾಗ ಜಗಳಗಳು, ಗಲಾಟೆಗಳು ನಡೆಯುತ್ತಲೇ ಇರುತ್ತದೆ. ಇದೀಗ ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗಿದ್ದು, ಟೋಲ್ ಸಿಬ್ಬಂದಿಯನ್ನು ಕನ್ನಡದಲ್ಲಿ ಮಾತನಾಡಬೇಕೆಂದು ಚಾಲಕ ಒತ್ತಾಯಿಸಿದ್ದಾನೆ.
ಇದನ್ನೂ ಓದಿ: 👩❤👨ಗಂಡ – ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು ಗೊತ್ತಾ?
ಆದರೆ ಸಿಬ್ಬಂದಿ ಮಾತ್ರ ಹಿಂದಿ ರಾಷ್ಟ್ರ ಭಾಷೆ, ಹಾಗಾಗಿ ನಾನು ಹಿಂದಿಯಲ್ಲಿ ಮಾತನಾಡುತ್ತೇನೆ ಎಂದು ತನ್ನನ್ನು ತಾನು ಸಮರ್ಥಿಸಿಕೊಂಡಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಕರ್ನಾಟಕದಲ್ಲಿ ಕನ್ನಡ ಮಾತಾನಾಡುವವರ ಸಂಖ್ಯೆಯು ಕಡಿಮೆಯಾಗುತ್ತಿದೆ. ಈಗಿನ ಯುವಕ ಯುವತಿಯರಂತೂ ಕನ್ನಡ ಗೊತ್ತಿದ್ದರೂ ಮಾತನಾಡದೇ, ಇಂಗ್ಲಿಷ್ ಸೇರಿದಂತೆ ಬೇರೆ ಭಾಷೆಯ ವ್ಯಾಮೋಹಕ್ಕೆ ಬಿದ್ದಿದ್ದಾರೆ.
ಹೀಗಾಗಿ ಕನ್ನಡ ಭಾಷೆ ಉಳಿಸಿ ಬೆಳೆಸಿ ಎನ್ನುವ ಕೂಗುಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಹಿಂದಿ ಮಾತನಾಡುತ್ತಿರುವ ಟೋಲ್ ಸಿಬ್ಬಂದಿಯ ವಿರುದ್ಧ ಕನ್ನಡಿಗನೊಬ್ಬನು ಗರಂ ಆಗಿದ್ದಾನೆ. ಈ ವೇಳೆಯಲ್ಲೂ ಕನ್ನಡ ಭಾಷೆ ಮಾತನಾಡುವಂತೆ ಹೇಳುತ್ತಿದ್ದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಈತನು ತನ್ನ ಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದು, ಭಾರತದ ಭಾಷೆ ಹಿಂದಿ ಅದನ್ನೇ ಮಾತನಾಡುತ್ತೇನೆ. ಇದು ಕೇಂದ್ರದ ಟೋಲ್, ಮಹಾರಾಷ್ಟ್ರದಲ್ಲಿ ಮರಾಠಿ, ತಮಿಳುನಾಡಿನಲ್ಲಿ ತಮಿಳು, ಕರ್ನಾಟಕದಲ್ಲಿ ಕನ್ನಡ ಈ ರೀತಿ ಮಾತನಾಡಲು ಆಗುವುದಿಲ್ಲ,.
ಹಿಂದಿಯಷ್ಟೆ ಮಾತನಾಡುತ್ತೇನೆ ಎಂದು ಹೇಳುತ್ತಾನೆ. ಸಿಬ್ಬಂದಿಯು ಹೀಗೆನ್ನುತ್ತಿದ್ದಂತೆ ಕಾರಿನಲ್ಲಿದ್ದ ವ್ಯಕ್ತಿಯು ಕೋಪಗೊಂಡು, ಕರ್ನಾಟಕದಲ್ಲಿ ಇದ್ದು ಕನ್ನಡ ಮಾತನಾಡೋದಿಲ್ಲ ಅಂತೀಯಾ ಎಂದು ಪ್ರಶ್ನಿಸಿದ್ದಾನೆ.
ಸಿಬ್ಬಂದಿಯ ಜೊತೆಗೆ ಇದ್ದ ಮತ್ತೊಬ್ಬರು ಕನ್ನಡ ಬರುವುದಿಲ್ಲ ಎನ್ನುತ್ತಿದ್ದಾರೆ ಅಲ್ವಾ ಎಂದು ಹಿಂದಿಯಲ್ಲಿ ಹೇಳಿದ್ದಾರೆ. ಅದಕ್ಕೆ ಪ್ರತಿಯಾಗಿ ಕಾರಿನಲ್ಲಿದ್ದ ವ್ಯಕ್ತಿಯು ಸಿಬ್ಬಂದಿಯು ಕನ್ನಡ ಬರುವುದಿಲ್ಲ ಎಂದು ಹೇಳುತ್ತಿಲ್ಲ, ಕನ್ನಡ ಮಾತನಾಡೋದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾನೆ.
ಈ ವಿಡಿಯೋದಲ್ಲಿ ಟೋಲ್ ಸಿಬ್ಬಂದಿಯು ಕಾರಿನಲ್ಲಿದ್ದ ವ್ಯಕ್ತಿಯ ಜೊತೆಗೆ ಜಗಳಕ್ಕೆ ಸಿದ್ಧವಾಗಿರುವಂತಿದೆ. ಈ ಘಟನೆಯು ಕರ್ನಾಟಕ-ಮಹಾರಾಷ್ಟ್ರ ಗಡಿಯ ಟೋಲ್ ಬೂತ್‌ನಲ್ಲಿ ನಡೆದಿದೆ ಎನ್ನಲಾಗಿದೆ.