ಬೆಳ್ತಂಗಡಿ:(ಸೆ.19) ಪತಿ ಹಾಗೂ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಎಂಬವರು ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದಾರೆ.
ತಮ್ಮ ಮನೆಯ ಸಮೀಪ ಕಾಡಿನಲ್ಲಿ ಗುರುವಾರ ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ನೋಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಿನಲ್ಲಿದ್ದರು.
ಇದೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ತಿಳಿದು ಬಂದಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆಯಾಗಿದೆ.
ಅವರ ಮೊದಲ ಪತ್ನಿ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದ್ದರು, ಬಳಿಕ ಕೆಲವು ವರ್ಷಗಳ ಹಿಂದೆ ಇವರು ಬೇಬಿಯನ್ನು ವಿವಾಹವಾಗಿದ್ದರು.
ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.