Wed. Nov 20th, 2024

Udupi; ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾವಳಿಗಳ ಉದ್ಘಾಟನೆ

ಉಡುಪಿ;(ಸೆ.19) ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಮತ್ತು ಹಿಂದೂ ಪ್ರೌಢಶಾಲೆ ಶಿರ್ವ ಇವರ ಜಂಟಿ ಆಶ್ರಯದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ 2024-25ನೇ ಸಾಲಿನ ತ್ರೋಬಾಲ್ ಪಂದ್ಯಾವಳಿಗಳನ್ನು ಹಿಂದೂ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಸೆ.18 ರಂದು ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಯಲ್ಲಮ್ಮ ಉದ್ಘಾಟಿಸಿದರು.

ಇದನ್ನೂ ಓದಿ: ⭕Nagamangala communal riots : ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್.ಐ.ಆರ್.!

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಲು ಕ್ರೀಡಾಚಟುವಟಿಕೆಗಳು ಸಹಕಾರಿಯಾಗಿದ್ದು ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಲು ಹೆತ್ತವರು ಮತ್ತು ಅಧ್ಯಾಪಕರು ಪ್ರೋತ್ಸಾಹ ನೀಡಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸದ್ದ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ| ವೈ. ಭಾಸ್ಕರ ಶೆಟ್ಟಿ ಮಾತನಾಡಿ ಜೀವನದಲ್ಲಿ ಆರ್ಥಿಕ ಶ್ರೀಮಂತಿಕೆ ಗಿಂತ ಆರೋಗ್ಯ ಶ್ರೀಮಂತಿಕೆ ಮುಖ್ಯವಾಗಿದ್ದು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ದೇಹದ ಅಂಗಾoಗಗಳು ಕ್ರೀಯಾಶೀಲವಾಗುವುದರ ಜೊತೆಗೆ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಯುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿದ್ದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್, ಹಿಂದೂ ಪ, ಪೂ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿಗಾರ್ ಶುಭ ಹಾರೈಸಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ ಶೆಟ್ಟಿ ಪಂದ್ಯಾವಳಿಗಳನ್ನು ಸಂಘಟಿಸಲು ಮಾಡಿರುವ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಸ್ಪರ್ಧಿಸುವಂತೆ ಕರೆ ನೀಡಿದರು.

ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ ಉಡುಪಿ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ಕಾಪು ವಲಯದ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ರಿತೇಶ್ ಕುಮಾ‌ರ್ ಶೆಟ್ಟಿ ಉಡುಪಿ ವಲಯದ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ, ಕಾರ್ಕಳ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಜಾರಾಂ ಶೆಟ್ಟಿ ಕಿಶನ್‌ರಾಜ್ ಶೆಟ್ಟಿ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಉಡುಪಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಎ., ದೈಹಿಕ ಶಿಕ್ಷಣ ಉಪನ್ಯಾಸಕ ದೇವೇಂದ್ರ ಹೆಗ್ಡೆ ಉಪಸ್ಥಿತರಿದ್ದರು.

ಪ್ರಾಥಮಿಕ ವಿಭಾಗದ ವಲಯಮಟ್ಟದಲ್ಲಿ ವಿಜೇತರಾದ ಬಾಲಕರ 5 ಮತ್ತು ಬಾಲಕಿಯರ 5 ತಂಡಗಳು ಹಾಗೂ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದಲ್ಲಿ ವಿಜೇತರಾದ ಬಾಲಕರ 5 ಮತ್ತು ಬಾಲಕಿಯರ 5 ತಂಡಗಳು – ಒಟ್ಟು 20 ತಂಡಗಳು ಈ ಜಿಲ್ಲಾ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದವು.

ಪ್ರೌಢಶಾಲಾ ಮುಖ್ಯಶಿಕ್ಷಕಿ ವಸಂತಿ ಸ್ವಾಗತಿಸಿ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿ, ಉಪನ್ಯಾಸಕಿ ಯಶೋಧ ಹಾಗೂ ಶಿಕ್ಷಕಿ ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು