Sun. Jun 1st, 2025

Bandar: ಬಂದಾರು ಪ್ರಾಥಮಿಕ ಶಾಲೆಯ 14 ನೇ ವಯೋಮಾನದ ಬಾಲಕಿಯರ ವಾಲಿಬಾಲ್ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ

ಬಂದಾರು :(ಸೆ.20) ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲಮಾಧ್ಯಮ ಶಾಲಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ

ಇದನ್ನೂ ಓದಿ: 🟣ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು

ಹಾಸನದಲ್ಲಿ ನಡೆಯುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಉತ್ತಮ ಪಾಸರ್ ಆಗಿ ಕು. ಅತಿಶ್ರೀ ಬಂದಾರು, ಉತ್ತಮ ಹೊಡೆತಗಾರ್ತಿಯಾಗಿ ಕು.ಯಶ್ಮಿತಾ ಬಂದಾರು ವೈಯಕ್ತಿಕ ಬಹುಮಾನ ಪಡೆದಿರುತ್ತಾರೆ.


ವಿಜೇತ ಬಂದಾರು ತಂಡದ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಸಹರಿಸಿದವರಿಗೆ, ಶಾಲಾಭಿವೃದ್ಧಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *