ಮಂಗಳೂರು :(ಸೆ.21) ಮಂಗಳೂರು ನಗರದ ಸಿಟಿ ಬಸ್‌ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ: ⭕ಉಪ್ಪಿನಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಸಂಚರಿಸುತ್ತಿದ್ದ ಬಸ್ ಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರಿ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೊತೆಗೆ ಬಸ್ ಚಾಲಕ ಮತ್ತು ನಿರ್ವಾಹಕರಲ್ಲಿ ಸಂಚಾರ ನಿಯಮಗಳ ಪಾಲನೆ ಮತ್ತು ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕಾರ್ಯ ಕೂಡ ನಡೆಸಲಾಗುತ್ತಿದೆ.
ಕಳೆದ ವಾರ ಉಳ್ಳಾಲ ವ್ಯಾಪ್ತಿಯಲ್ಲಿ ಖಾಸಗಿ ಬಸ್ ನ ಫುಡ್ ಬೋರ್ಡಿನಲ್ಲಿ ನೇತಾಡಿಕೊಂಡು ಸಂಚರಿಸುತ್ತಿದ್ದ ಶಾಲಾ ವಿದ್ಯಾರ್ಥಿಯೋರ್ವ ರಸ್ತೆಗೆ ಎಸೆಯಲ್ಪಟ್ಟಿದ್ದ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕನರ ಮೇಲೆ ಪೋಲಿಸರು ಪ್ರಕರಣ ದಾಖಲು ಮಾಡಿದ್ದರು.
ಇದೀಗ ಈ ಘಟನೆಯ ಬಳಿಕ ಎಚ್ಚೆತ್ತ ಮಂಗಳೂರು ಪೊಲೀಸರು ಇದೀಗ ನಗರದ ಸಿಟಿ ಬಸ್‌ಗಳ ಫುಟ್ ಬೋರ್ಡಿನಲ್ಲಿ ನಿಲ್ಲಿಸಿಕೊಂಡು ಪ್ರಯಾಣಕ್ಕೆ ಅನುವು ಮಾಡಿಕೊಡುವ ಬಸ್ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.